ವಿಜಯಪುರ (ದೇವನಹಳ್ಳಿ): ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ ಕ್ರೀಡೆಗಳ ಅಭ್ಯಾಸ ಮಾಡುವಂತಾಗಿದೆ.

ಈ ಶಾಲೆಯಲ್ಲಿ 8 ರಿಂದ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಮೂರು ವರ್ಷಗಳಿಂದ ದೈಹಿಕ ಶಿಕ್ಷಣದ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ದೈಹಿಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಕುರಿತು ಹಲವು ಬಾರಿ ಶಾಲಾಭಿವೃದ್ಧಿ ಸಮಿತಿಯವರ ಮೂಲಕ ಸರ್ಕಾರಕ್ಕೆ ಮನವಿ ನೀಡಿದ್ದರೂ ಯಾವ ಪ್ರಯೋಜವಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಮಕ್ಕಳಿಗೆ ಕ್ರೀಡಾಕೂಟಗಳಲ್ಲಿ ಆಸಕ್ತಿ ಇದ್ದು, ಅವರಿಗೆ ಸೂಕ್ತ ಮಾರ್ಗದರ್ಶನವಿಲ್ಲದೆ ಅವರ ಕ್ರೀಡಾ ಕನಸುಗಳು ಕಮರಿಹೋಗುತ್ತಿವೆ. ಆದರೂ ಛಲ ಬಿಡದ ಮಕ್ಕಳು ವಿವಿಧ ಕ್ರೀಡಾ ಪುಸ್ತಕಗಳನ್ನು ಓದಿ ತಾವೇ ವಾಲಿಬಾಲ್, ಕಬ್ಬಡ್ಡಿ, ಖೋ-ಖೋ ಕ್ರೀಡೆಗಳನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂಬುದು ಪೋಷಕಿ ಸುಧಾ ಅವರ ಮಾತಾಗಿದೆ.

ಹಲವು ಮಂದಿ ದಾನಿಗಳ ಸಹಕಾರದಿಂದ ಶಾಲೆ ಅಭಿವೃದ್ಧಿಪಡಿಸಲಾಗಿದೆ. ನಾವು ಹಲವು ಬಾರಿ ಉಪನಿರ್ದೇಶಕರು, ಶಾಸಕರನ್ನು ಭೇಟಿ ಮಾಡಿ ನಮ್ಮ ಶಾಲೆಗೆ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಆದರೆ, ಇದುವರೆಗೂ ಒಬ್ಬ ಶಿಕ್ಷಕರನ್ನೂ ನೇಮಕ ಮಾಡಿಲ್ಲ. ಈ ಬಾರಿ ಶಿಕ್ಷಣ ಸಚಿವರನ್ನೇ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸುತ್ತೇವೆ ಎಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಬ್ಬಣ್ಣ ತಿಳಿಸಿದರು.

ನಮ್ಮ ಶಾಲೆಯಲ್ಲಿ ದೈಹಿಕ ಶಿಕ್ಷಕರಿಲ್ಲದ ಕಾರಣ, ಇತರೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳನ್ನು ಹೇಳಿ ಕೊಡುತ್ತಿದ್ದಾರೆ ಎಂದು ಉಪಪ್ರಾಂಶುಪಾಲ ಪಿ.ವೆಂಕಟೇಶ್ ಅವರ ಮಾತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.