ಆನೇಕಲ್: ಕೈಗಾರಿಕಾ ಪ್ರದೇಶಗಳಲ್ಲಿ ಭದ್ರತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸುವ ಸಲುವಾಗಿ ರ‍್ಯಾಪಿಡ್ ಆಕ್ಷನ್ ಫೋರ್ಸ್‌ನ (ಆರ್‌ಎಎಫ್) ಅಧಿಕಾರಿಗಳ ತಂಡವು ಹೆಬ್ಬಗೋಡಿ ಪೊಲೀಸರು ಮತ್ತು ಬೊಮ್ಮಸಂದ್ರ ಕೈಗಾರಿಕಾ ಸಂಘದೊಂದಿಗೆ ಕೈಗಾರಿಕಾ ಪ್ರದೇಶಗಳ ಪರಿಶೀಲನೆ ನಡೆಸಿತು ಎಂದು ಹೆಬ್ಬಗೋಡಿ ಸರ್ಕಲ್ ಇನ್‌ಸ್ಪೆಕ್ಟರ್ ಗೌತಮ್ ತಿಳಿಸಿದರು.

ಕಮಾಂಡರ್ ಮನೋಜ್ ನೇತೃತ್ವದ ಅಧಿಕಾರಿಗಳ ತಂಡ ಬೊಮ್ಮಸಂದ್ರ, ಅತ್ತಿಬೆಲೆ, ಜಿಗಣಿ, ವೀರಸಂದ್ರ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಈ ಪ್ರದೇಶಗಳಲ್ಲಿ ಭದ್ರತೆ ಕೈಗೊಳ್ಳಲು ಪೊಲೀಸರು ಮತ್ತು ಕೈಗಾರಿಕಾ ಸಂಘಗಳ ಜೊತೆಗೂಡಿ ಕೆಲಸ ಮಾಡುವ ಸಂಬಂಧ ಚರ್ಚಿಸಿತು.

ಕೈಗಾರಿಕಾ ಸಂಘದ ಅಧ್ಯಕ್ಷ ಎ. ಪ್ರಸಾದ್ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ಭದ್ರತೆಯು ಅತ್ಯಂತ ಅವಶ್ಯಕವಾಗಿದ್ದು ಈ ದೃಷ್ಟಿಯಿಂದ ಆರ್‌ಎಎಫ್‌ಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕೆಐಎಡಿಬಿ ವತಿಯಿಂದ ಜಾಗ ಮಂಜೂರು ಮಾಡಿಸಿಕೊಂಡು ಆರ್‌ಎಎಫ್‌ಗೆ ಕಚೇರಿ ಮತ್ತು ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸಲು ಸಂಘ ನೆರವು ನೀಡಲಿದೆ ಎಂದು ತಿಳಿಸಿದರು.

ಸಬ್ ಇನ್‌ಸ್ಪೆಕ್ಟರ್ ವೆಂಕಟೇಶ್, ಕಮಾಂಡರ್ ಮನೋಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.