ಆನೇಕಲ್: ಬನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿರತೆ ಮರಿಗಳು ಮತ್ತು ಜಿಂಕೆಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿ, ‘ಹಿರಿಯ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ. ಸರಣಿ ಸಾವಿನ ಸಂಬಂಧ ಯಾವುದೇ ಲೋಪವಾಗಿದ್ದರೂ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ’ ಎಂದರು.

ಸೋಂಕು ಹರಡದಂತೆ ಇತರ ಮೃಗಾಲಯಗಳಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಬನ್ನೇರುಘಟ್ಟ ಉದ್ಯಾನದ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣಕ್ಕೆ ಬೇರೆ ಉದ್ಯಾನಗಳಿಗೆ ಭೇಟಿ ನೀಡದಂತೆ ಸೂಚಿಸಲಾಗಿದೆ ಎಂದರು.

ವನ್ಯ ಮೃಗಗಳ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಸಮಸ್ಯೆ ಅರಿತು, ಪರಿಹಾರ ಕಂಡುಕೊಳ್ಳಬೇಕು ಎಂದರು.

ಮುಂದುವರಿದ ಜಿಂಕೆಗಳ ಸಾವಿನ ಸರಣಿ: ಬುಧವಾರ ತಡ ರಾತ್ರಿ ಮತ್ತೆ ಮೂರು ಜಿಂಕೆಗಳು ಸಾವನ್ನಪ್ಪಿವೆ. ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆ ಉದ್ಯಾನದಿಂದ 37 ಜಿಂಕೆಗಳನ್ನು ಸಂರಕ್ಷಿಸಿ ಜೈವಿನ ಉದ್ಯಾನಕ್ಕೆ ತರಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.