ದೇವನಹಳ್ಳಿ: ರೇಡಿಯಂ ಲೇಪಿಸಿದ ಚಿನ್ನದ ಕಡಗ ಧರಿಸಿ ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನನ್ನು ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಕೈಗೆ ಧರಿಸುವ ಕಡಗದ ರೂಪದಲ್ಲಿದ್ದ 499 ಗ್ರಾಂ ತೂಕದ ಚಿನ್ನವನ್ನು ಚಿನ್ನ ಎಂದು ಗುರುತಿಸದಂತೆ ರೇಡಿಯಂ ಕೋಟಿಂಗ್ ಮಾಡಿ ಸಾಗಾಣೆ ಮಾಡುತ್ತಿದ್ದ.

ಪ್ರಯಾಣಿಕನ ಹಿಂದಿನ ಅಪರಾಧ ಕೃತ್ಯಗಳಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಕೂಲಂಕಷವಾಗಿ ಪರಿಶಿಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ವಶಕ್ಕೆ ಪಡೆದ ಚಿನ್ನದ ಕಡಗದ ಒಟ್ಟು ಮೌಲ್ಯ ₹31.14 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.