ದೊಡ್ಡಬಳ್ಳಾಪುರ: ಇಲ್ಲಿನ ಗೀತಂ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಉಗಾಂಡ ದೇಶದ ವಿದ್ಯಾರ್ಥಿನಿ ಅಸೀನ ಅಗಷ (24) ಬುಧವಾರ ರಾತ್ರಿ ಹಾಸ್ಟೆಲ್ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ.

ವಿದ್ಯಾರ್ಥಿನಿ ಸಾವಿನಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಕಾಲೇಜಿನ ಕಚೇರಿ, ಕ್ಯಾಂಟೀನ್ ಕಿಟಕಿಗಳ ಗಾಜುಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.ಡಿವೈಎಸ್ಪಿ ನಾಗರಾಜ್, ಇನ್‌ಸ್ಪೆಕ್ಟರ್ ಸತೀಶ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಆಂಧ್ರಪ್ರದೇಶ ಹಾಗೂ ಕರ್ನಾಟಕದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ವಿದ್ಯಾರ್ಥಿಗಳ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈಗ ವಿದ್ಯಾರ್ಥಿನಿಸಾವಿನಿಂದ ಗೀತಂ ವಿವಿಯಲ್ಲಿಮತ್ತೆಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿದ್ಯಾರ್ಥಿನಿ ಶವವನ್ನು ನಗರದ ಸರ್ಕಾರಿ ಶವಾಗರದಲ್ಲಿ ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.