ಆನೇಕಲ್: ತಾಲ್ಲೂಕಿನ ಬಾಡರಹಳ್ಳಿಯಲ್ಲಿ ಶುಕ್ರವಾರ ನಿರ್ಮಾಣ ಹಂತದ ಖಾಸಗಿ ಶಾಲಾ ಕಟ್ಟಡ ಕುಸಿದಿದೆ. ಈ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 16ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಜಾರ್ಖಂಡ್ ಮೂಲದ ಮಿನರ್ ಬಿಶ್ವಾಸ್, ಶಾಹಿದ್ ಮೃತ ಕಾರ್ಮಿಕರು.

ಗಾಯಾಳುಗಳನ್ನು ಆನೇಕಲ್‌ನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಕಾಂಕ್ರಿಟ್ ಹಾಕುತ್ತಿದ್ದ ವೇಳೆ ಸೆಂಟ್ರಿಂಗ್ ಕುಸಿದು ಅವಘಡ ಸಂಭವಿಸಿದೆ. ಸೆಂಟ್ರಿಂಗ್ ಮೇಲೆ ತೂಕ ಹೆಚ್ಚಾಗಿದ್ದರಿಂದ ಅದು ಕುಸಿದಿದೆ ಎನ್ನಲಾಗಿದೆ.

ಕಾಂಕ್ರಿಟ್ ಕೆಳಗೆ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಅಗ್ನಿಶಾಮಕ ಸಿಬ್ಬಂದಿ ಜೊತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡೆ ಭೇಟಿ ನೀಡಿ, ಆನೇಕಲ್ ಪೊಲೀಸರ ಬಳಿ ಮಾಹಿತಿ ಪಡೆದುಕೊಂಡರು.

ಸೆಂಟ್ರಿಂಗ್ ಗಟ್ಟಿಯಾಗಿ ಹಾಕಿರಲಿಲ್ಲ. ಇದರಿಂದ ಅವಘಡ ಸಂಭವಿಸಿದೆ. ಮೇಲ್ನೋಟಕ್ಕೆ ನಿರ್ಲಕ್ಷ್ಯ ಕಂಡು ಬಂದಿದೆ. ಘಟನೆಗೆ ಕಾರಣರಾದವರ ವಿರುದ್ಧ ಕಾನುನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.