ಹೊಸಕೋಟೆ: ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಗುಂಡೂರಿನಲ್ಲಿ ವಕೀಲ ಸಂಪತ್ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ, ಘಟನೆಗೆ ಕಾರಣರಾದ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯ ಸಿಪಿಐ ಚನ್ನೇಶ್ ಅವರನ್ನು ಕೂಡಲೆ ಅಮಾನತ್ತು ಮಾಡುವಂತೆ ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘ ಗುರುವಾರ ತಹಶೀಲ್ದಾರ್ ಮೂಲಕ ಗೃಹ ಸಚಿವ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಹೊಸಕೋಟೆ ಸಿವಿಲ್ ನ್ಯಾಯಾಲಯದಿಂದ ತಾಲ್ಲೂಕು ಪಂಚಾಯಿತಿಯವರೆಗೆ ಪ್ರತಿಭಟನಾ ಜಾಥಾ ನಡೆಸಿ ತಾಲ್ಲೂಕು ಕಚೇರಿಗೆ ಮುಂದೆ ಪ್ರತಿಭಟನೆ ನಡೆಸಿದರು.

ಅನುಗೊಂಡನಹಳ್ಳಿ ಪೋಲಿಸ್ ಇನ್ಸ್‌ಪೆಕ್ಟರ್ ಚನ್ನೇಶ್ ವಕೀಲ ಸಂಪತ್ ಅವರನ್ನು ನ್ಯಾಯವಾಧಿ ಎಂದು ನೋಡದೆ ಕೊರಳು ಪಟ್ಟಿ, ಹಿಡಿದು, ತಳ್ಳಾಟ ನಡೆಸಿದ್ದಾರೆ. ಜೊತೆಗೆ ಅಸಂವಿಧಾನಿಕ ಭಾಷೆ ಬಳಸಿರುವುದು ಖಂಡನೀಯ ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಚನ್ನೇಶ್ ಅವರನ್ನು ಅಮಾನತ್ತು ಮಾಡುವಂತೆ ಒತ್ತಾಯಿಸಿ ಡಿವೈಎಸ್‌ಪಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಗೃಹ ಸಚಿವರು ಮತ್ತು ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ರಾಜ್ಯದ ಎಲ್ಲ ವಕೀಲರು ಇದರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹರಿಂದ್ರ, ಮಾಜಿ ಅಧ್ಯಕ್ಷ ಸುಬ್ರಮಣಿ, ಸಂಘದ ಪದಾಧಿಕಾರಿಗಳಾದ ನವಿನ್‌ಕುಮಾರ್, ಕೃಷ್ಣಪ್ಪ, ಪ್ರಭಾಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.