ಪ್ರಜಾವಾಣಿ ವಾರ್ತೆ

ದೊಡ್ಡಬಳ್ಳಾಪುರ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ80ರಷ್ಟು ಉದ್ಯೋಗ ಕಲ್ಪಿಸಲು ಹಾಗೂ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಶುಕ್ರವಾರ ಕನ್ನಡಪರ ಸಂಘಟನೆಗಳ ಒಕ್ಕೂಟ ವತಿಯಿಂದ ತಾಲ್ಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಎ.ನಂಜಪ್ಪ, ಜಿಲ್ಲಾ ಮುಖಂಡ ಅಗ್ನಿ ವೆಂಕಟೇಶ್, ಕನ್ನಡ ಜಾಗೃತಿ ವೇದಿಕೆ ಜಿಲ್ಲಾ ಅಧ್ಯಕ್ಷ ನಾಗರಾಜು ಮಾತನಾಡಿ, ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ನೀಡುವ ವಿಧೇಯಕವನ್ನು ಜಾರಿಗೆ ತರಬೇಕು. 40 ವರ್ಷಗಳ ಇತಿಹಾಸ ಇರುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದರು.

ರಾಜ್ಯದಲ್ಲಿ ಇಲ್ಲಿಯವರೆಗೆ ಆಡಳಿತ ನಡೆಸಿರುವ ಎಲ್ಲ ರಾಜಕೀಯ ಪಕ್ಷಗಳು ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿವೆ. ಖಾಸಗಿ ಕಂಪನಿಗಳು ಉದ್ಯೋಗ ನೀಡಿಕೆಯಲ್ಲಿ ಸದಾ ಕನ್ನಡಿಗರನ್ನು ವಂಚಿಸುತ್ತಲೇ ಬರುತ್ತಿವೆ. ಕಾನೂನು ಜಾರಿ ಮೂಲಕವೇ ಮಾತ್ರವೇ ಕನ್ನಡಿಗರಿಗೆ ಉದ್ಯೋಗ ಸಿಗಲು ಸಾಧ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್, ನಗರ ಘಟಕದ ಅಧ್ಯಕ್ಷ ತರುಣ್ಸರ್ಜಾ, ಕಸಬಾ ಘಟಕದ ಅಧ್ಯಕ್ಷ ಗಿರೀಶ್,ಪಿರ್ಪಾಷಾ, ಪಚಡಿವಾಲ, ನಯಾಜ್ ಖಾನ್, ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಹರಿಕುಮಾರ್,ಮಹಿಳಾ ಮುಖಂಡರಾದ ಕುಮುದಾ, ಶಶಿಕಲಾ, ಪದ್ಮ,ಕಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.