ಆನೇಕಲ್ : ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆ 300 ಹಾಸಿಗೆಯ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯವುಳ್ಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಗುಬ್ಬಲಾಳದಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಜಿದ್ದಾಜಿದ್ದಿನ ಕಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಅಂತರದಿಂದ ಗೆಲುವು ನೀಡಿದ ಜನತೆಯ ಋಣ ತೀರಿಸುರುವುದು ನಮ್ಮ ಬದ್ಧತೆಯಾಗಿದೆ ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕುಂಠಿತಗೊಂಡಿದೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆ ನಿರಾಸೆಗೊಂಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು ಎಂದರು.

ಶಾಸಕ ಎಂ.ಕೃಷ್ಣಪ್ಪ ಮಾತನಾಡಿದರು.

ಶಾಸಕ ಸಿ.ಕೆ.ರಾಮಮೂರ್ತಿ, ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ, ಮುಖಂಡರಾದ ರಮೇಶ್ ರಾಜು, ಹನುಮಂತಯ್ಯ, ಶಾಂತಾ ಬಾಬು, ಟಿ.ನಾರಾಯಣ್, ಜಯರಾಮ್, ಹುಲ್ಲಹಳ್ಳಿ ಶ್ರೀನಿವಾಸ್, ಸುಬ್ರಮಣಿ, ರಾಜಶೇಖರರೆಡ್ಡಿ, ಕೇಶವರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.