ವಿಜಯಪುರ (ದೇವನಹಳ್ಳಿ): ಪತಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆತನ ಮನೆಯ ಮುಂದೆ ಸಂಬಂಧಿಕರ ಜೊತೆ ಸೋಮವಾರ ಪ್ರತಿಭಟನೆ ನಡೆಸಿದ ಮಹಿಳೆಯೊಬ್ಬರು ತಮಟೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ತೆರಳಿ ಜಾತಿ ನಿಂದನೆ ದೂರು ದಾಖಲಿಸಿದ್ದಾರೆ.

‘ನನ್ನಿಂದ ₹14 ಲಕ್ಷ ಪಡೆದ ಪತಿ ಪುರುಷೋತ್ತಮ್ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಮನೆಯಿಂದ ಹೊರಹಾಕಿದ್ದಾರೆ’ ಎಂದು ಶಾರದ ಎಂಬುವರು ದೂರಿನಲ್ಲಿ ತಿಳಿಸಿದ್ದಾರೆ.

ಕುಟುಂಬ ಸದಸ್ಯರ ಜತೆ ಪತಿಯ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಮಹಿಳೆ, ‘ಅದಾಗಲೇ ಮದುವೆಯಾಗಿ, ಎರಡು ಮಕ್ಕಳ ತಾಯಿಯಾಗಿದ್ದ ನನ್ನನ್ನು ಗಂಡನ ಮನೆಯಿಂದ ಆರು ವರ್ಷದ ಹಿಂದೆ ಕರೆದುಕೊಂಡು ಬಂದು ಮದುವೆಯಾಗಿದ್ದ ಪುರುಷೋತ್ತಮ್ ಈಗ ಹಲ್ಲೆ ನಡೆಸಿ, ಹೊರ ಹಾಕಿದ್ದಾರೆ. ಜಾತಿ ಹೆಸರಿನಲ್ಲಿ ನಿಂದಿಸಿದ್ದಾರೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.