ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಪ್ರಾಂಶುಪಾಲೆಯ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ನಮಗೆ ಅಧಿಕಾರವಿಲ್ಲ. ಆದರೂ ಮಕ್ಕಳಿಗೆ ದೈಹಿಕವಾಗಿ ಶಿಕ್ಷೆ ಕೊಡುವಂತಿಲ್ಲ. ಮಗುವನ್ನು ಶಿಕ್ಷಿಸಿರುವುದರಿಂದ ಶಾಲೆಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಶಿಫಾರಸು ಮಾಡಲಾಗುತ್ತದೆ. ಘಟನೆಯ ಕುರಿತು ವರದಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಲಾಗಿದೆ.
–ಬೈಲಾಂಜಿನಪ್ಪ, ಉಪ ನಿರ್ದೇಶಕ ಶಿಕ್ಷಣ ಇಲಾಖೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ