ದೇವನಹಳ್ಳಿ: ‘ಗ್ರಾಮಗಳ ಅಭಿವೃದ್ಧಿಗೆ ವಾರ್ಡ್ ಸಭೆ ಪೂರಕವಾಗಿದೆ. ಗ್ರಾಮಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗ್ರಾಮಸ್ಥರು ಚರ್ಚಿಸಬೇಕು’ ಎಂದು ಅಣ್ಣೇಶ್ವರ ಪಿಡಿಒ ಗಂಗರಾಜು ತಿಳಿಸಿದರು.

ತಾಲ್ಲೂಕಿನ ಅಣ್ಣೇಶ್ವರ ಗ್ರಾ.ಪಂ ವ್ಯಾಪ್ತಿಯ ಯರಪ್ಪನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಅಣ್ಣೇಶ್ವರ ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ವಾರ್ಡ್ ಸಭೆಯಲ್ಲಿ ಮಾತನಾಡಿದರು.

‘ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಅಗತ್ಯ ಕ್ರಮ ವಹಿಸಲು ಸರ್ಕಾರಿ ಗೋಮಾಳದ ಜಾಗವನ್ನು ಗುರುತಿಸಬೇಕು. ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಂದು ಗ್ರಾಮ ಸ್ವಚ್ಛತೆಯಿಂದ ಕೂಡಿರಬೇಕು’ ಎಂದರು.

‘ಪ್ರತಿ ಮನೆ ಮತ್ತು ಅಕ್ಕಪಕ್ಕಗಳಲ್ಲಿ ಸ್ವಚ್ಛ ಪರಿಸರವನ್ನು ನಿರ್ಮಾಣ ಮಾಡಬೇಕು. ಚರಂಡಿ ದುರಸ್ತಿ, ಮೂಲ ಸೌಲಭ್ಯಗಳು ಮತ್ತು ಸೋಲಾರ್ ಹೈಮಾಸ್ಟ್ ಅಳವಡಿಕೆಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ. ವಾರ್ಡ್ ಸಭೆಯಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಿ ಗ್ರಾಮಗಳ ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದರು.

ಉಪಾಧ್ಯಕ್ಷ ಮುನಿರಾಜಪ್ಪ ಮಾತನಾಡಿ, ‘ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ವಾರ್ಡ್ ಸಭೆಗೆ ಗ್ರಾಮಸ್ಥರು ಬರಬೇಕು. ಗ್ರಾಮದಲ್ಲಿ ಆಗಬೇಕಾಗಿರುವ ಕಾಮಗಾರಿಗಳ ಬಗ್ಗೆ ಚರ್ಚಿಸಿ, ಮಾಹಿತಿ ನೀಡಬೇಕು’ ಎಂದು ಹೇಳಿದರು.

ಅಣ್ಣೇಶ್ವರ ಗ್ರಾ.ಪಂ ಅಧ್ಯಕ್ಷೆ ಉಮಾ ಮುನಿರಾಜು, ಮಂಜುಳಾ ವೆಂಕಟೇಶ್, ರುಕ್ಮಿಣಿಮ್ಮ, ಕಾರ್ಯದರ್ಶಿ ಕೃಷ್ಣಮೂರ್ತಿ, ಮುಖ್ಯಶಿಕ್ಷಕಿ ಗೀತಾ, ಆರ್.ವೆಂಕಟೇಶ್, ಮುನಿರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.