ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಮ್ಮನ ಸ್ಮಾರಕ ಬಾವಿ ಅಭಿವೃದ್ಧಿಗೆ ₹ 50 ಲಕ್ಷ: ಪ್ರಭಾವತಿ

ಕಿತ್ತೂರು ಚನ್ನಮ್ಮನ ಸ್ಮಾರಕಗಳ ಅಭಿವೃದ್ಧಿಗೆ ಕ್ರಮ: ಪ್ರಭಾವತಿ
Published 4 ಜುಲೈ 2024, 14:29 IST
Last Updated 4 ಜುಲೈ 2024, 14:29 IST
ಅಕ್ಷರ ಗಾತ್ರ

ಬೈಲಹೊಂಗಲ: ಪಟ್ಟಣದ ಹುಡೇದ ಗಲ್ಲಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮಾರಕ ಬಾವಿ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಕ್ರೀಯಾಯೋಜನೆ ರೂಪಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಹೇಳಿದರು.

ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ಐಕ್ಯ ಸ್ಥಳ ಹಾಗೂ ಹುಡೇದ ಗಲ್ಲಿ ಹತ್ತಿರ ಇರುವ ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮಾರಕ ಭಾವಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.

'ಕಿತ್ತೂರು ಚನ್ನಮ್ಮ ಸ್ಮಾರಕ ಬಾವಿ ಅಭಿವೃದ್ದಿಗೆ ಶಾಸಕರು ವಿಶೇಷ ಕಾಳಜಿವಹಿಸಿದ್ದು, ಸರ್ಕಾರದಿಂದ ಅನುದಾನ ಒದಗಿಸಿ ಅಭಿವೃದ್ದಿಗೆ ಮುಂದಾಗಿದ್ದಾರೆ. ಶಾಸಕರ ಮಾರ್ಗದರ್ಶನದಲ್ಲಿ ಕಿತ್ತೂರು ಚನ್ನಮ್ಮನ ಸ್ಮಾರಕಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ' ಎಂದರು.

'ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ರಾಣಿ ಕಿತ್ತೂರು ಚನ್ನಮ್ಮನ ಶೌರ್ಯ, ಸಾಹಸ, ಪರಾಕ್ರಮವನ್ನು ಯುವ ಪಿಳೀಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಐತಿಹಾಸಿಕ ಸ್ಮಾರಕಗಳ ಅಭಿವೃದ್ಧಿ ಪಡಿಸಿ, ಸುಂದರ ತಾಣಗಳನ್ನಾಗಿ ಮಾಡಲು ಸರಕಾರ ವಿಶೇಷ ಆಸಕ್ತಿವಹಿಸಿದೆ' ಎಂದರು.

'ನಾಡಿನ ಜನರ ಆಸೆಯದಂತೆ ವೀರರಾಣಿ ಚನ್ನಮ್ಮ ಸ್ಮಾರಕ ಭಾವಿ ಹಾಗೂ ವೀರ ಮಾತೆಯ ಐಕ್ಯಸ್ಥಳವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗಿದೆ. ಭಾವಿಯನ್ನು ಸಂಪೂರ್ಣವಾಗಿ ಹೊಳೇತ್ತ್ತಿ, ಗೋಡೆ ನಿರ್ಮಿಸಿ, ಗ್ರೈನೇಟ್ ಹಾಕಿ ಸುಂದರ ತಾಣ ಮಾಡಲು ಸೂಚಿಸಿದ್ದೇನೆ. ಬರುವ ದಿನಗಳಲ್ಲಿ ಐಕ್ಯಸ್ಥಳದಲ್ಲಿ ರಾಣಿ ಚನ್ನಮ್ಮಾಜಿ ಜೀವನ ಚರಿತ್ರೆ ಪರಿಚಯಿಸುವ ನಿಟ್ಟಿನಲ್ಲಿ ಮೂರ್ತಿಗಳನ್ನು ಹಾಗೂ ಮ್ಯೂಸಿಯಂ ನಿರ್ಮಾಣ, ಚಿತ್ರಗಳ ಮೂಲಕ ಇತಿಹಾಸ ತಿಳಿಸುವ ಬಗ್ಗೆ ಯೋಜನೆ ಹಾಕಲಾಗಿದೆ. ಶೀಘ್ರ ಕೆಲಸ ಆರಂಭವಾಗಲಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT