ಬೆಳಗಾವಿ: ನೀರು ಪೂರೈಕೆಯಲ್ಲಿ ಇಲ್ಲಿನ ದಕ್ಷಿಣ ಮತಕ್ಷೇತ್ರಕ್ಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ, ಶಾಸಕ ಅಭಯ ಪಾಟೀಲ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದಕೊಂಡರು.

ಗುರುವಾರ ಸಭೆ ನಡೆಸಿದ ಅವರು, ‘ಉತ್ತರ ಕ್ಷೇತ್ರದಲ್ಲಿ ಶೇ 65ರಷ್ಟು ನೀರು ಪೂರೈಕೆ ಆಗುತ್ತಿದೆ. ಆದರೆ, ದಕ್ಷಿಣ ಮತಕ್ಷೇತ್ರಕ್ಕೆ ಅನ್ಯಾಯವಾಗುತ್ತದೆ. ಸಮನಾಗಿ ನೀರು ಒದಗಿಸಬೇಕು’ ಎಂದು ಸೂಚಿಸಿದರು.

‘ಕ್ಷೇತ್ರದಲ್ಲಿ ಯಾವಾಗ ನೀರು ಬರುತ್ತದೆ ಎನ್ನುವುದೇ ಇಲ್ಲಿನ ನಿವಾಸಿಗಳಿಗೆ ಗೊತ್ತಾಗುವುದಿಲ್ಲ. ಸೋರಿಕೆ ಮತ್ತು ಪೂರೈಕೆ ಮೇಲೆ ಸಿಬ್ಬಂದಿ ನಿಗಾ ವಹಿಸುತ್ತಿಲ್ಲ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ನಿರ್ವಹಣೆ ಮಾಡುತ್ತೇವೆ ಎಂದರೆ ಸಮಸ್ಯೆ ಅರ್ಥ ಆಗುವುದಿಲ್ಲ. ಬಡಾವಣೆಗಳಲ್ಲಿ ಸುತ್ತು ಹಾಕಬೇಕು. ಆಗ, ಜನರ ಬವಣೆ ಅರ್ಥವಾಗುತ್ತದೆ’ ಎಂದು ತಾಕೀತು ಮಾಡಿದರು.

‘ಉತ್ತರ, ದಕ್ಷಿಣ ಎಂದು ನೋಡಬೇಡಿ. ಎಲ್ಲರೂ ಮನುಷ್ಯರೇ. ಎಲ್ಲರಿಗೂ ನೀರು ಬೇಕು. ದಕ್ಷಿಣ ಕ್ಷೇತ್ರದಲ್ಲಿ ಸಮರ್ಪಕ ನೀರು ಪೂರೈಕೆಗಾಗಿ ಎಷ್ಟು ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆ ಪ್ರಸ್ತಾವ ಸಿದ್ಧಪಡಿಸಿ ಸಲ್ಲಿಸಬೇಕು. 24x7 ನಿರಂತರ ನೀರು ಪೂರೈಕೆ ಯೋಜನೆ ನಗರದ ಎಲ್ಲ ವಾರ್ಡ್‌ಗಳಿಗೂ ವಿಸ್ತರಣೆ ಮಾಡಬೇಕು. ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೂ ಚರ್ಚಿಸಲಾಗುವುದು. ಯೋಜನೆ ಕುರಿತು ಶೀಘ್ರವೇ ಮರು ಟೆಂಡರ್ ಕರೆಯುವಂತೆ ಒತ್ತಾಯಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.