ಬೆಳಗಾವಿ: ನೆರೆಯ ಮಹಾರಾಷ್ಟ್ರದ ಅಂಬೋಲಿ ಘಾಟ್ ರಸ್ತೆಯ ಅಲ್ಲಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದ್ದು, ಆ ಮಾರ್ಗದಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ಈ ರಸ್ತೆಯ ಬದಿಯಲ್ಲಿಯೇ ಇರುವ ಪ್ರಖ್ಯಾತ ಅಂಬೋಲಿ ಫಾಲ್ಸ್ ಸೇರಿದಂತೆ ವಿವಿಧ ಜಲಪಾತಗಳನ್ನು ಕಣ್ತುಂಬಿಕೊಳ್ಳಲು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದ ನೂರಾರು ಮಂದಿ ಈ ರಸ್ತೆಯಲ್ಲಿ ಪ್ರಯಾಣಿಸುತ್ತಾರೆ. ಅಲ್ಲದೇ, ಬೆಳಗಾವಿಯಿಂದ ಗೋವಾ ಸಂಪರ್ಕಿಸುವ ಹೆದ್ದಾರಿಗಳಲ್ಲಿ ಇದೂ ಒಂದಾಗಿದೆ. ಇದು ಬಂದ್ ಆಗಿರುವುದರಿಂದ ಸಾವಂತವಾಡಿ–ಗೋವಾದ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕೊಡುತ್ತಿಲ್ಲ.

‘ದುರಸ್ತಿ ಆಗುವವರೆಗೆ ಈ ಮಾರ್ಗದಲ್ಲಿ ಸಂಚರಿಸಬಾರದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.