ಶನಿವಾರ, 28 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ ಜಿಲ್ಲೆ ವಿಭಜನೆಗೆ ದಸರಾ ನಂತರ ಮನವಿ: ಲಕ್ಷ್ಮಿ ಹೆಬ್ಬಾಳಕರ

Published : 28 ಸೆಪ್ಟೆಂಬರ್ 2024, 6:12 IST
Last Updated : 28 ಸೆಪ್ಟೆಂಬರ್ 2024, 6:12 IST
ಫಾಲೋ ಮಾಡಿ
Comments

ಬೆಳಗಾವಿ: ‘ದಸರಾ ಮುಗಿದ ನಂತರ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ, ಮನವಿ ಪತ್ರ ಕೊಡುತ್ತೇವೆ. ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬಹುದು’ ಎಂದರು.

‘ಪಂಚಮಸಾಲಿ ಮೀಸಲಾತಿ ಕುರಿತು ಚರ್ಚಿಸಲು ಸಿದ್ದರಾಮಯ್ಯ ಸಮಯ ಕೊಡುತ್ತಿಲ್ಲ. ನಮ್ಮ ಸಮುದಾಯದ ಶಾಸಕರೂ ಧ್ವನಿ ಎತ್ತುತ್ತಿಲ್ಲ’ ಎಂಬ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಲು ಶ್ರೀಗಳಿಗೆ ಹಿಂದೆಯೇ ಸಮಯ ಕೊಡಿಸಿದ್ದೇವೆ. ಸುವರ್ಣ ವಿಧಾನಸೌಧದಲ್ಲೂ ಭೇಟಿಗೆ ಅವಕಾಶ ಕೊಡಿಸಿದ್ದೆವು. ಶ್ರೀಗಳು ಏಕೆ ಹೀಗೆ ಹೇಳಿದರೋ ಗೊತ್ತಿಲ್ಲ. ನಾನು ಶ್ರೀಗಳ ಜತೆಗೆ ಮಾತನಾಡುತ್ತೇನೆ’ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಮುರುಗೇಶ ನಿರಾಣಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಸ್ವಾಭಿಮಾನಿ ಪಂಚಮಸಾಲಿ ಸಮುದಾಯಕ್ಕೆ ನಿರಾಣಿ ಏನು ಒಳ್ಳೆಯದ್ದನ್ನು ಮಾಡಿದ್ದಾರೆ ಹೇಳಲಿ. ಆಮೇಲೆ ನನಗೆ ಬಂಗಾರ ಕೊಡಿಸುವ ಬಗ್ಗೆ ತಿಳಿಸಲಿ. ತಮ್ಮ ಅಧಿಕಾರ ಅವಧಿಯಲ್ಲಿ ನಿರಾಣಿ ಈ ಸಮುದಾಯಕ್ಕೆ ಏನೂ ಮಾಡಲಿಲ್ಲ. ಆದರೆ, ನಾನು ಮೀಸಲಾತಿ ಹೋರಾಟದ ಪರವಾಗಿ ಇದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT