ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮ – ಸಿದ್ದರಾಮಯ್ಯ

Published 11 ಡಿಸೆಂಬರ್ 2023, 7:31 IST
Last Updated 11 ಡಿಸೆಂಬರ್ 2023, 7:31 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹಿಳೆಯನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೊಸ ವಂಟಮೂರಿಯಲ್ಲಿ ಘಟನೆ ನಡೆದಿದ್ದು ಗಮನಕ್ಕೆ ಬಂದಿದೆ. ಶಿಸ್ತು ಕ್ರಮ ವಹಿಸಲಾಗುವುದು’ ಎಂದರು.

‘ಸದನದಲ್ಲಿ ಮಂಗಳವಾರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಶಾಸಕರು ಯಾವುದೇ ವಿಷಯ ಪ್ರಸ್ತಾಪಿಸಿದರೂ ನಾನು ಉತ್ತರ ಕೊಡಲು ಸಿದ್ಧನಿದ್ದೇನೆ. ನಾವಂತೂ ಸದನದಲ್ಲಿ ಒಂದು ನಿಮಿಷ ಕೂಡ ಕಾಲಹರಣ ಮಾಡಿಲ್ಲ. ಬಿಜೆಪಿ ನಾಯಕರಲ್ಲಿ ಎರಡು– ಮೂರು ಗುಂಪುಗಳಿವೆ. ಅವರ ಒಳಜಗಳದ ಕಾರಣ ಕಾಲಹರಣವಾಗುತ್ತಿದೆ’ ಎಂದರು.

‘2ಎ ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಸ್ವಾಮೀಜಿ ಅವರನ್ನು ಅಧಿವೇಶನದ ಬಳಿಕ ಕರೆದು ಮಾತಾಡುತ್ತೇನೆ. ಬೆಂಗಳೂರಿಗೆ ಬರಲು ಕೇಳಿಕೊಂಡಿದ್ದೇನೆ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಸುವರ್ಣ ವಿಧಾನಸೌಧದಲ್ಲಿ ವೀರ ಸಾವರ್ಕರ್‌ ಫೋಟೊ ತೆರವುಗೊಳಿಸುವ ವಿಚಾರ ಸ್ಪೀಕರ್‌ಗೆ ಬಿಟ್ಟ ವಿಚಾರ’ ಎಂದೂ ಅವರು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT