ಅಥಣಿ: ಇಲ್ಲಿನ ಪುರಸಭೆಯ 27 ವಾರ್ಡ್‌ಗಳಿಗೆ ಸೋಮವಾರ ಚುನಾವಣೆ ನಡೆದಿದ್ದು, ಶೇ 75ರಷ್ಟು ಮತದಾನವಾಗಿದೆ.

ವಾರ್ಡ್ ನಂ.24ರ ಮತಗಟ್ಟೆಯಲ್ಲಿ ಇವಿಎಂ ಕೆಟ್ಟಿದ್ದರಿಂದ ಒಂದು ತಾಸು ವಿಳಂಬವಾಗಿ ಮತದಾನ ಆರಂಭವಾಯಿತು. ಅಲ್ಲಿ ಸಂಜೆ 5ರ ಬದಲಿಗೆ 6ರವರೆಗೆ ಮತದಾನಕ್ಕೆ ಅವಕಾಶ ನೀಡಲಾಯಿತು. ಬಹುತೇಕ ಶಾಂತಿಯುತವಾಗಿ ಪ್ರಕ್ರಿಯೆ ನಡೆಯಿತು.

ಶಾಸಕ ಮಹೇಶ ಕುಮಠಳ್ಳಿ ವಾರ್ಡ್ ನಂ.13ರ ಜೆ.ಇ. ಸಂಸ್ಥೆಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು. ‘ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

99 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ರಾಜಕೀಯ ಭವಿಷ್ಯವನ್ನು ಮತದಾರರು ಬರೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.