ಬೆಳಗಾವಿ: ಅನ್ಯಕೋಮಿನ ವ್ಯಕ್ತಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಖಂಡಿಸಿ ತಾಲ್ಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಗುರುವಾರ ಬಂದ್ ಕರೆ ನೀಡಲಾಗಿತ್ತು.

ಗ್ರಾಮದ ವರ್ತಕರು ಸ್ವಯಂ ಪ್ರೇರಣೆಯಿಂದ ಅಂಗಡಿ–ಮುಂಗಟ್ಟುಗಳನ್ನು ಮುಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಎದುರು ಹಿರಿಯರು, ಮಹಿಳೆಯರು ಜಮಾಯಿಸಿ, ‘ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದರು.

ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬೀಗಿ ಭದ್ರತೆ ಕೈಗೊಂಡಿದ್ದರು.

ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಗ್ರಾಮಸ್ಥರು ಆಗಮಿಸಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

‘ಯುವತಿ ಒಬ್ಬರೇ ಇದ್ದಾಗ ಮನೆಗೆ ನುಗ್ಗಿದ ಆರೋಪಿ, ಅತ್ಯಾಚಾರಕ್ಕೆ ಯತ್ನಿಸಿದ್ದ. ನಮ್ಮೂರಿನಲ್ಲಿ ಆಗಾಗ ಇಂಥ ಘಟನೆ ನಡೆಯುತ್ತಿರುವ ಕಾರಣ, ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ಈ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಊರಲ್ಲಿ ಮತ್ತೆ ಇಂಥ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಗರ ಪಾಟೀಲ, ಉಪಾಧ್ಯಕ್ಷೆ ದೀಪಾ ಮರಗಾಳೆ, ಸದಸ್ಯರಾದ ಉದಯ ಸಿದ್ದನ್ನವರ, ಪ್ರೇಮಾ ನರೋಟಿ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.