ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ | ಕಳಪೆ ಕಾಮಗಾರಿ: ಕೊಚ್ಚಿ ಹೋದ ಬಾಂದಾರ

Published 16 ಜುಲೈ 2024, 5:15 IST
Last Updated 16 ಜುಲೈ 2024, 5:15 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಾಂಜರಿ– ಬಾವನ ಸವದತ್ತಿ ಗ್ರಾಮಗಳ ನಡುವೆ ಕೃಷ್ಣಾ ನದಿಗೆ ನಿರ್ಮಿಸಿದ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಬಾಂದಾರ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳೆದ ಮೂರು ದಿನಗಳಿಂದ ನೀರಿನ ಹರಿವು ಹೆಚ್ಚಾಗಿದ್ದು, ಅದರ ರಭಸ ತಾಳಿದೇ ಬಾಂದಾರ ಹಾಳಾಗಿದೆ.

2019ರಲ್ಲಿ ₹ 5 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. ಆದರೂ ನೀರಿನಲ್ಲಿ ಮುಳುಗುತ್ತಿತ್ತು. ಮತ್ತಷ್ಟು ಎತ್ತರ ಹೆಚ್ಚಿಸಲು ₹ 2 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.

ಪೈಪಗಳನ್ನು ಹಾಕಿ 5 ಅಡಿ ಎತ್ತರ ಮಾಡುವುದು ಹಾಗೂ ಎರಡೂ ಬದಿಯಲ್ಲಿ ಸಂಪರ್ಕ ರಸ್ತೆ ನಿರ್ಮಾಣ ಮಾಡುವ ಕಾಮಗಾರಿ ನಡೆದಿದೆ. ಕಳಪೆ ಕಾಮಗಾರಿಯಿಂದಾಗಿ ಎಲ್ಲವೂ ಹಾಳಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಘಟಕದ ವಕ್ತಾರ ತ್ಯಾಗರಾಜ ಕದಂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT