ಬೆಳಗಾವಿ: ನಗರದಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿರುವುದರಿಂದ ಅಂತಹ ಕುಟುಂಬಗಳಿಗೆ ನಗರದ ಮಂಡೋಳಿ ರಸ್ತೆಯ ಕೈವಲ್ಯ ಯೋಗ ಮಂದಿರದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೋಮವಾರ ರಾತ್ರಿಯೇ ಈ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು.

ಈ ಕಾಳಜಿ ಕೇಂದ್ರದಲ್ಲಿ 15 ಜನ ಆಶ್ರಯ ಪಡೆದುಕೊಂಡಿದ್ದಾರೆ. ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ.

ಮಹಿಳೆಯರು ಮತ್ತು ಮಕ್ಕಳು ಇರುವುದರಿಂದ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮನೆಗೆ ನೀರು ನುಗ್ಗಿರುವ ಕುಟುಂಬಗಳಿಗೆ ಪರಿಹಾರವನ್ನು ನೀಡಲಾಗಿದೆ. ಕೆಲವು ಕುಟುಂಬಗಳಿಗೆ ಸಂಬಂಧಿಸಿದಂತೆ ದಾಖಲೆಗಳು ದೊರಕದಿರುವುದರಿಂದ ಪರಿಹಾರ ವಿಳಂಬವಾಗಿದೆ. ಅವರಿಗೂ ನಾಳೆಯೇ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಾಲಿಕೆಯ ಆಯುಕ್ತ ಡಾ.ರುದ್ರೇಶ್ ಘಾಳಿ, ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.