ಬೆಳಗಾವಿ: ‘ಇಲ್ಲಿನ ತಹಶೀಲ್ದಾರ್ ಕಚೇರಿ ಎಸ್ಡಿಎ ರುದ್ರಣ್ಣ ಯಡವಣ್ಣವರ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ’ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇಬಜಾರ್ ಎಸಿಪಿ ಅವರಿಗೆ ಬಂದಿದೆ.

ಆರೋಪಿಗಳಾದ ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್ಡಿಎ ಅಶೋಕ ಕಬ್ಬಲಿಗೇರ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾದ ಬೆನ್ನಲ್ಲೇ, ಈ ಪತ್ರ ಬಂದಿದೆ.

ಬಿಳಿ ಹಾಳೆಯ ಮೇಲೆ ಟೈಪಿಸಿ ಪ್ರಿಂಟ್ ತೆಗೆದು, ಲಕೋಟೆಯಲ್ಲಿ ಹಾಕಿ ಖಡೇಬಜಾರ್ ಠಾಣೆಗೆ ಪೋಸ್ಟ್ ಮಾಡಲಾಗಿದೆ.

ಇದರ ಪ್ರತಿಗಳನ್ನು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಸೇರಿ ಹಲವರಿಗೆ ಪೋಸ್ಟ್ ಮಾಡಲಾಗಿದೆ ಎಂದೂ ಪತ್ರದಲ್ಲಿ ಪಟ್ಟಿ ನೀಡಲಾಗಿದೆ.

‘ರುದ್ರಣ್ಣನದು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಅವನು ಮಾಡಿಕೊಂಡಿಲ್ಲ. ಇದು ಕೊಲೆ. ತಹಶೀಲ್ದಾರ್ ಜೀಪ್ನ ಚಾಲಕ ಯಲ್ಲಪ್ಪ ಬಡಸದ ಎಂಬಾತನೇ ಕೊಲೆಯ ಸೂತ್ರಧಾರ. ಆ ವಾಹನ ತಪಾಸಿಸಿದರೆ ಮತ್ತು ಯಲ್ಲಪ್ಪನ ವಿಚಾರಣೆ ಮಾಡಿದರೆ, ಕೊಲೆ ರಹಸ್ಯ ಹೊರಬರುತ್ತದೆ. ಯಲ್ಲಪ್ಪನ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡು, ಅವರ ಎಲ್ಲ ದುಡ್ಡು ಹೊಡೆದಿದ್ದಾಳೆ. ಮೃತಪಟ್ಟವರಿಗೆ ನ್ಯಾಯ ಸಿಗಬೇಕು. ಪ್ರಕರಣ ಮುಚ್ಚಿ ಹಾಕಬಾರದು’ ಎಂದು ಪತ್ರದಲ್ಲಿ ಬರೆಯಲಾಗಿದೆ.

‘ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಅನಾಮಧೇಯ ಪತ್ರದ ಬಗ್ಗೆ ಪರಿಶೀಲಿಸಲಾಗುವುದು. ಎಲ್ಲ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.