ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಮಕನಮರಡಿ, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಭಾಗದ 10 ಸೇತುವೆಗಳು ಜಲಾವೃತಗೊಂಡಿವೆ.

ಯಮಕನಮರಡಿ ವರದಿ: ಮಹಾ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಹುಕ್ಕೇರಿ ತಾಲ್ಲೂಕಿನ ದಡ್ಡಿ, ಸಲಾಮವಾಡಿ, ಮೊದಗಾ, ಶೆಟ್ಟಿಹಳ್ಳಿ ಗ್ರಾಮದ ನಾಲ್ಕು ಸೇತುವೆಗಳು ಶನಿವಾರ ಮುಳುಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.

‘ನದಿ ದಡದ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಸೇತುವೆ ಮೇಲೆ ಜನರು ಓಡಾಡದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದು, ನಿಗಾ ವಹಿಸಿದ್ದಾರೆ’ ಎಂದು ಸಲಾಮವಾಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ ಕಬ್ಬಗೋಳ ‘ಪ್ರಜಾವಾಣಿ’ಗೆ ತಿಳಿಸಿದರು.

‘ಘಟಪ್ರಭಾ ನದಿ ತೀರದಲ್ಲಿ ಜಾನುವಾರುಗಳನ್ನು ಬಿಡದಂತೆ ಡಂಗೂರ ಸಾರಲಾಗಿದೆ. ಹೊಲ– ಗದ್ದೆಗೆ ನೀರು ನುಗ್ಗಿದ್ದು, ಅಲ್ಲಿ ಯಾರೂ ಹೋಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಮೋದಗಾ ಗ್ರಾಮದ ಹೊರವಲಯದಲ್ಲಿ ಭಾವೇಶ್ವರಿ ದೇವಾಲಯಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ. ನದಿ ಆಚೆಗಿನ ಮರಣಹೋಳ ಗ್ರಾಮಸ್ಥರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅನ್ಯ ಮಾರ್ಗದಲ್ಲಿ ಸಂಚರಿಸಲು ಬಸ್ ಸೌಲಭ್ಯ ಕಲ್ಪಿಸಲಾಗಿದೆ’ ಎಂದರು.

ನಿಪ್ಪಾಣಿ ವರದಿ: ನಿಪ್ಪಾಣಿ ತಾಲ್ಲೂಕಿನಲ್ಲಿ ಕಾರದಗಾ– ಭೋಜ, ಭೋಜವಾಡಿ– ಕುನ್ನೂರ, ಸಿದ್ನಾಳ– ಅಕ್ಕೋಳ, ಜತ್ರಾಟ– ಭೀವಶಿ ಸೇತುವೆಗಳು ಜಲಾವೃತಗೊಂಡಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ವೇದಗಂಗಾ– ದೂಧಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬದುತ್ತಿದೆ.

ಇನ್ನೊಂದೆಡೆ ಗೋಕಾಕ ಬಳಿಯ ಶಿಂಗಳಾಪುರ ಸೇತುವೆ, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳಗಳು ಕೂಡ ಎರಡು ದಿನಗಳ ಹಿಂದೆ ಬಂದ್ ಆಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.