ಬೆಳಗಾವಿ: ‘ಈ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ’ ಎಂದು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಕೆಲ ವಿಚಾರಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ಆದರೆ, ನಮ್ಮ ನಾಯಕರಲ್ಲಿದ್ದ ಭಿನ್ನಾಭಿಪ್ರಾಯ ಬಹುತೇಕ ಅಂತ್ಯವಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲಾ ಬಿಜೆಪಿಗೆ ಒಳ್ಳೆಯದಾಗಲಿದೆ’ ಎಂದರು.

‘ಈ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ. ನಾವೂ ಸೋಲುವ ಪ್ರಶ್ನೆ ಇಲ್ಲ. ಹಾಗಾಗಿ ಯಾರ ಮೇಲೆಯೂ ಆಪಾದನೆ ಬಾರದು’ ಎಂದು ಉತ್ತರಿಸಿದರು.

ಶಾಸಕ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆಗೆ, ‘ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಸಂಪುಟ ವಿಸ್ತರಿಸುತ್ತಾರೆ. ಚುನಾವಣೆ ಕಾರಣಕ್ಕೆ ಅದು ಮುಂದಕ್ಕೆ ಹೋಗಿರಬಹುದು. ಆಗ, ಬೆಳಗಾವಿ ಜಿಲ್ಲೆಗೆ ಮತ್ತು ರಮೇಶ ಜಾರಕಿಹೊಳಿಗೆ ಒಳ್ಳೆಯದಾಗುತ್ತದೆ ಎಂಬ ಆಸೆ ಇಟ್ಟುಕೊಂಡಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

ಲಖನ್ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬ ಪ್ರಶ್ನೆಗೆ, ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಸುತ್ತೇನೆ ಎಂದು ಅವರೆ ಹೇಳಿದ್ದಾರೆ’ ಎಂದಷ್ಟೆ ಹೇಳಿದರು.

ಇದನ್ನೂ ಓದಿ:ವಿಧಾನಪರಿಷತ್ ಚುನಾವಣೆ: ಮುಖಂಡರ ಸಭೆಯಲ್ಲಿ ಮುಖಕೊಟ್ಟು ಮಾತನಾಡದ ಸವದಿ–ಬಾಲಚಂದ್ರ

'ಹಿಂದೆ ಏನೇ ಆಗಿರಬಹುದು, ಈಗ ಒಂದಾಗಿದ್ದೇವೆ'
ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮಾತನಾಡಿ, ‘ಹಿಂದೆ ನಮ್ಮ ನಡುವೆ ಏನೇ ಆಗಿರಬಹುದು. ಆದರೆ, ಈಗ ಒಂದಾಗಿದ್ದೇವೆ. ವಾಯವ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದದ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಾಗಲಿದೆ. ಹಿಂದೆ ಆಗಿರುವ ಘಟನೆಗಳ ಬಗ್ಗೆ ಚರ್ಚಿಸುವ ಸಮಯವಿದಲ್ಲ. ಹಿಂದಿನದು ಆಗಿರುವುದು ಆಗಬಾರದ’ ಎಂದರು.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ‘ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಮುಜುಗರ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.