ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ನಾನು ಪದೇ ಪದೇ ಪ್ರಚಾರ ನಡೆಸಲು ಬರುತ್ತಿಲ್ಲ. ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಶ್ರಮಿಸುತ್ತಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಇಲ್ಲಿ ಬುಧವಾರ ಹೇಳಿದರು.

ಅವರ ಪಕ್ಷದ ಅಭ್ಯರ್ಥಿ ಸೋಲುವ ಭೀತಿಯಿಂದಾಗಿ ಮುಖ್ಯಮಂತ್ರಿ ಆಗಾಗ ಪ್ರಚಾರ ನಡೆಸುತ್ತಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಹೆಚ್ಚು ಉತ್ತರ ಕೊಡುವುದಿಲ್ಲ ಎಂದರು.

ಕೋವಿಡ್- 19 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಏ.18ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ. ಎಲ್ಲರೊಂದಿಗೂ ಚರ್ಚಿಸಿ, ಕೊರೊನಾ ರಾತ್ರಿ ಕರ್ಫ್ಯೂ ಅನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸಲು ಯೋಚಿಸಲಾಗುತ್ತಿದೆ. ಜನರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.