ಬೆಳಗಾವಿ: ‘ನನಗೆ ಸಚಿವ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಆದರೆ, ಪದೇ ಪದೇ ಕೇಳಲು ಹೋಗುವುದಿಲ್ಲ. ಕಾಯುತ್ತೇನೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನಿಂದ ಬಂದು ಗೆದ್ದವರೆಲ್ಲರಿಗೂ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಅವರು ಆಶ್ವಾಸನೆ ಕೊಟ್ಟಿದ್ದರು. ಈಗ ಅವರಿಗೆ ಯಾವುದೋ ಸಮಸ್ಯೆ ಬಂದಿರಬಹುದು. ಹೀಗಾಗಿ ಸುಮ್ಮನಿದ್ದೇನೆ. ಮುಂದಿನ ದಿನಗಳಲ್ಲಿ ಭರವಸೆಯಂತೆ ನಡೆದುಕೊಳ್ಳುವ ವಿಶ್ವಾಸವಿದೆ. ಹೀಗಾಗಿ, ಪಕ್ಷಕ್ಕೆ ಮುಜುಗರವಾಗುವ ಕೆಲಸ ಮಾಡುವುದಿಲ್ಲ’ ಎಂದರು.

‘ಸದ್ಯ ನನಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮಂಡಳಿಯಿಂದ 97,137 ಮನೆಗಳ ನಿರ್ಮಾಣಕ್ಕೂ ಅನುಮೋದನೆ ಕೊಟ್ಟಿದ್ದಾರೆ. ಸ್ಲಂ ಜನರ ಕಣ್ಣೀರು ಒರೆಸುವ ಒಳ್ಳೆಯ ಅವಕಾಶ ನನಗೆ ಸಿಕ್ಕಿದೆ. ಬಿಜೆಪಿ ಸೇರಿದ್ದಕ್ಕೆ ಸಂತೋಷವಿದೆ. ಕ್ಷೇತ್ರದ ಅಭಿವೃದ್ಧಿಗೆ ಸಚಿವರು ತಕ್ಷಣವೇ ಸ್ಪಂದಿಸುತ್ತಾರೆ. ಮೂಲ–ವಲಸಿಗರು ಎನ್ನುವುದು ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.