ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಕಿ ನೀಡುವಲ್ಲಿ ಕೇಂದ್ರದಿಂದ ರಾಜಕೀಯ: ಸಚಿವ ಕೆ.ಎಚ್‌.ಮುನಿಯಪ್ಪ

Published 3 ಮೇ 2024, 16:03 IST
Last Updated 3 ಮೇ 2024, 16:03 IST
ಅಕ್ಷರ ಗಾತ್ರ

ಬೆಳಗಾವಿ: ‘ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ ವಿತರಿಸಲು ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ರಾಜಕೀಯ ಮಾಡಿದೆ. ನಮ್ಮ ಮನವಿಗೆ ಸ್ಪಂದಿಸದೆ ವಂಚಿಸಿದೆ’ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಕಷ್ಟ ನೀಗಿಸಿದ್ದೇವೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಯುವಜನರಿಗೆ ಟಿಕೆಟ್ ಕೊಟ್ಟಿದ್ದೇವೆ. ಎರಡೂ ಕಡೆ ಕಾಂಗ್ರೆಸ್‌ಗೆ ಪೂರಕವಾದ ವಾತಾವರಣವಿದ್ದು, ಗೆಲ್ಲುವ ವಿಶ್ವಾಸವಿದೆ’ ಎಂದರು.

‘ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್‌ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಎಚ್‌.ಡಿ.ರೇವಣ್ಣ ಒಳ ಒಪ್ಪಂದ ಮಾಡಿಕೊಂಡಿದ್ದಾರೆ’ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ‘ಜೋಶಿ ರಾಜಕೀಯ ದುರುದ್ದೇಶಕ್ಕಾಗಿ ಈ ರೀತಿ ಹೇಳಿದ್ದಾರೆ. ಈ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ನೇಮಿಸಿದೆ. ಅದು ನೀಡುವ ತನಿಖಾ ವರದಿ ಆಧರಿಸಿ, ಕ್ರಮ ವಹಿಸಲಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಾನೂ ಖಂಡಿಸುತ್ತೇನೆ’ ಎಂದರು.

‘ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ’ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಈಗ ಆ ಚಿಂತನೆ ಏಕೆ ಬೇಕು? ಗ್ಯಾರಂಟಿ ಯೋಜನೆಗಳು ನಮಗೆ ಶಕ್ತಿ ಕೊಟ್ಟಿವೆ. ಜನ ನಮ್ಮೊಂದಿಗೆ ಇದ್ದಾರೆ’ ಎಂದರು.

‘ಚುನಾವಣೆ ನಂತರ ಮುಖ್ಯಮಂತ್ರಿ ಬದಲಾಗಾಗುತ್ತಾರಾ’ ಎಂಬ ಪ್ರಶ್ನೆಗೆ, ‘ಅಂಥ ಪರಿಸ್ಥಿತಿ ಈಗಿಲ್ಲ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT