ಬೆಳಗಾವಿ: 2015ರಿಂದ 2020ರ ಅವಧಿಯಲ್ಲಿ ಶ್ಲಾಘನೀಯ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರದಾನ ಮಾಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಸಮಾರಂಭದಲ್ಲಿ, ಇಲ್ಲಿನ ಅಗ್ನಿಶಾಮಕ ಠಾಣೆಯ ಪ್ರಕಾಶ್ ಶಿಂಧೆ, ರಾಜ್ಯ ವಿಪತ್ತು ಸ್ಪಂದನಾ ಪಡೆ ‘ಸಿ’ ಕಂಪನಿಯ ಅಜಿತ ದುಂಡಪ್ಪ ಹಾಗೂ ಕಿರಣ ಕುರಬೇಟ ಪದಕಕ್ಕೆ ಭಾಜನರಾದರು.

2019ರಲ್ಲಿ ಧಾರವಾಡದಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದಲ್ಲಿ 56 ಮಂದಿ ಮತ್ತು ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಅಪಘಾತದಲ್ಲಿ 9 ಮಂದಿ ಪ್ರಾಣ ರಕ್ಷಣೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಮತ್ತು 2019ರಲ್ಲಿ ಭೀಕರ ಪ್ರವಾಹ ಉಂಟಾದ ಸಂದರ್ಭದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗಾಗಿ ಅವರಿಗೆ ಪುರಸ್ಕಾರ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.