ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಇರ್ಫಾನ್ ಬೇಪಾರಿ ಅವರು ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಒಗ್ಗಟ್ಟಾದ ಹೆಜ್ಜೆ ಇಟ್ಟು ಅಚ್ಚರಿ ಮೂಡಿಸಿದರು.

23 ಸದಸ್ಯ ಬಲ ಹೊಂದಿರುವ ಪುರಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಲಾ ಒಂದೊಂದೇ ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ, ತಹಶೀಲ್ದಾರ ಚಿದಂಬರ ಕುಲಕರ್ಣಿ ಅವಿರೋಧ ಫಲಿತಾಂಶ ಘೋಷಿಸಿದರು.

20ನೇ ವಾರ್ಡಿನ ವೀಣಾ ಕವಟಗಿಮಠ ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಿಂದ ಗೆಲುವು ಸಾಧಿಸಿದ್ದರು. 8ನೇ ವಾರ್ಡಿನ ಇರ್ಫಾನ್ ಬೇಪಾರಿ ಕೂಡ ಇದೇ ಮೊದಲ ಬಾರಿಗೆ ಕಾಂಗ್ರೆಸ್ಸಿನಿಂದ ಆಯ್ಕೆಯಾಗಿದ್ದರು. ಮೊದಲ ಪ್ರಯತ್ನದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಗದ್ದುಗೆ ಏರಿದ್ದು ವಿಶೇಷ.

23 ಸದಸ್ಯರ ಪೈಕಿ 10 ಕಾಂಗ್ರೆಸ್ ಸದಸ್ಯರು, 13 ಬಿಜೆಪಿ ಸದಸ್ಯರು ಇದ್ದಾರೆ. ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ಹಾಗೂ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೀಣಾ ಅವರ ಪತಿ, ಜಗದೀಶ ಅವರ ತೆರೆಮರೆಯ ಆಟದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಸಮ್ಮಿಶ್ರ ಆಡಳಿತ ಸಾಧ್ಯವಾಯಿತು.

ಒಂದಾದ ಕಾಂಗ್ರೆಸ್-ಬಿಜೆಪಿ ಕುರಿತು 'ಪ್ರಜಾವಾಣಿ'ಯಲ್ಲಿ ಗುರುವಾರ ಬೆಳಕು ಚೆಲ್ಲಲಾಗಿತ್ತು.
.ಚಿಕ್ಕೋಡಿ ಪುರಸಭೆ: ಯಾರಿಗೆ ಗದ್ದುಗೆ?.ಪುಣೆ–ಬೆಳಗಾವಿ–ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ಮೋದಿಯಿಂದ ಚಾಲನೆ: ಶೆಟ್ಟರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.