ಬೆಳಗಾವಿ: ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬುಧವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ, 12 ಆರೋಪಿಗಳ ವಿರುದ್ಧದ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ಒಬ್ಬ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕ ಇದ್ದು, ಅವರ ವಿರುದ್ಧದ ಚಾರ್ಜ್‌ಶೀಟ್ ಫೆಬ್ರುವರಿ 8ರಂದು ಬಾಲ ನ್ಯಾಯ ಮಂಡಳಿಗೆ ಸಲ್ಲಿಕೆಯಾಗಲಿದೆ.

2023ರ ಡಿಸೆಂಬರ್ 10ರಂದು ಪ್ರೇಮಿಗಳು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ, ಯುವತಿಯ ಪಾಲಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಗುಂಪಾಗಿ ಹಲ್ಲೆ ಮಾಡಿದ್ದರು. ಈ ಬಗ್ಗೆ ಡಿಸೆಂಬರ್ 11ರಂದು ಕಾಕತಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ.

ಆರೋಪಿಗಳ ಮೇಲೆ ಕಲಂ 109, 114, 117, 143, 147, 148, 307, 323, 324, 326, 341, 342, 353, 354, 354(B), 355, 392, 427, 452, 504, 506 r/w, 149, ಐಪಿಸಿ 34 ಹಾಗೂ 37, 2(A) ಪಿಡಿಎಲ್‌ಪಿ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
.ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಮದುವೆ ನೋಂದಣಿ ಮಾಡಿಸಿದ ಪ್ರೇಮಿಗಳು.ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಪುಂಡುಗಂದಾಯದಂಥ ಹೊಣೆ ಹೊರಿಸಿ- ಹೈಕೋರ್ಟ್.ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜಾಮೀನು ತಿರಸ್ಕಾರ.ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಹೈಕೋರ್ಟ್ ಕಳವಳ, ಸ್ವಯಂ ಪ್ರೇರಿತ ಪ್ರಕರಣ ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.