ಬೆಳಗಾವಿ: ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ. ಕಾಸ್ಮೊಪಾಲಿಟನ್ ಸಂಸ್ಕೃತಿಯನ್ನು ಅಳವಡಿಸಿಕೊಂಡಿರುವ ವಿಶಾಲ ಮನೋಭಾವದ ಜನರು ಈ ನಗರದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಎಸ್ಪಿಎಂ ರಸ್ತೆಯಲ್ಲಿ ಶಿವಾಜಿ ಉದ್ಯಾನದ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಲಾದ ರವೀಂದ್ರ ಕೌಶಿಕ್ ಇ- ಗ್ರಂಥಾಲಯವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಂಕುಚಿತ ಮನೋಭಾವಕ್ಕೆ ಇಲ್ಲಿ ಜಾಗ ಇಲ್ಲ ಎನ್ನುವುದನ್ನು ಈಚೆಗೆ ನಡೆದ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ತೋರಿಸಿಕೊಟ್ಟಿದ್ದಾರೆ. ಅಭಿವೃದ್ಧಿಗೆ ನಮ್ಮ ಬೆಂಬಲ ಎನ್ನುವುದನ್ನು ತಿಳಿಸಿದ್ದಾರೆ ಎಂದರು.

ಇಲ್ಲಿನ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ನಗರದ ಅಭಿವೃದ್ಧಿಗಾಗಿ ಡಬಲ್ ಎಂಜಿನ್ ರೀತಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಮಹಾನಗರಪಾಲಿಕೆ ಸದಸ್ಯರ ಜವಾಬ್ದಾರಿ ಹೆಚ್ಚಾಗಿದೆ. ಜನರ ಸೇವೆಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ನಗರದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ಕೊಡಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿಯು ಕರ್ನಾಟಕದ ಕಿರೀಟ. ಅದರ ಗೌರವ ಹೆಚ್ಚಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ,ಸಚಿವರಾದ ಉಮೇಶ ಕತ್ತಿ, ಬಿ.ಎ. ಬಸವರಾಜ, ಶಾಸಕ ಅಭಯ ಪಾಟೀಲ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿ... ಮಠಾಧೀಶರ ವಿಶ್ವಾಸ, ನಂಬಿಕೆಗೆ ವ್ಯತ್ಯಾಸ ಆಗದಂತೆ ಕೆಲಸ ಮಾಡುತ್ತೇನೆ: ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.