ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಪ್ರವಾಹಬಾಧಿತ ಗಲ್ಲಿಗಳಿಗೆ ಭೇಟಿ ನೀಡಲಿಲ್ಲ. ಸಂತ್ರಸ್ತರ ಅಹವಾಲು ಆಲಿಸಲಿಲ್ಲ. ಆ ಪಟ್ಟಣದ ಮಹಾಲಕ್ಷ್ಮಿ ದೇವಸ್ಥಾನದ ಎದುರು ಉಕ್ಕಿ ಹರಿಯುತ್ತಿರುವ ಹಳ್ಳವನ್ನಷ್ಟೆ ವೀಕ್ಷಿಸಿದರು.

ಅಲ್ಲಿನ ಮಠ ಗಲ್ಲಿ, ನದಿ ಗಲ್ಲಿ, ಕುಂಬಾರ ಗಲ್ಲಿ, ಹರಗಾಪುರ ಗಲ್ಲಿ, ಹೊಸ ಓಣಿ, ಸುತಾರ ಗಲ್ಲಿ, ಪಿಂಜಾರ ಗಲ್ಲಿಯಲ್ಲಿ ಮನೆಗಳು ಜಲಾವೃತವಾಗಿವೆ. ಮುಖ್ಯಮಂತ್ರಿ ನಮ್ಮ ಗಲ್ಲಿಗಳಿಗೆ ಬಂದು ಅಹವಾಲು ಆಲಿಸುತ್ತಾರೆ; ಪರಿಹಾರ ಕಲ್ಪಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಜನರು ಇದ್ದರು. ಆದರೆ, ಅವರ ನಿರೀಕ್ಷೆಗೆ ಯಡಿಯೂರಪ್ಪ ಅವರು ತಣ್ಣೀರು ಎರಚಿದರು. ಸ್ಥಳೀಯರ ಸಮಸ್ಯೆಗಳನ್ನು ಅವರು ಆಲಿಸಲಿಲ್ಲ. ಕೆಲವೆ ನಿಮಿಷಗಳಲ್ಲಿ ಅಲ್ಲಿಂದ ತೆರಳಿದರು.

ರಾಜೀನಾಮೆ ಕೊಡಲು ಸಿದ್ಧ ಎನ್ನುತ್ತಿರುವ ಬಿಎಸ್ವೈ ನಡೆ ನಿಗೂಢ!

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಬಂದಿದ್ದೇನೆ. ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು. ಅಧಿಕಾರಿಗಳ ಸಭೆ ನಡೆಸಿ ಅವರಿಂದ ಮಾಹಿತಿ ಪಡೆಯುತ್ತೇನೆ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿಹೈಕಮಾಂಡ್ ಏನು ಸಂದೇಶ ನೀಡುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದರು.

ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್. ಅಶೋಕ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ ಇದ್ದರು.

ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ: ಬಿಎಸ್ವೈ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.