ಬೆಳಗಾವಿ: ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆಂದು ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣಕ್ಕೆ ಭಾನುವಾರ ಬಂದಿಳಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸಂದೇಶ ಬಂದ ತಕ್ಷಣ ನಿಮಗೂ ಗೊತ್ತಾಗಲಿದೆ ಎಂದರು.

ಜಲಾಶಯಗಳು ತುಂಬಿ ತುಳಕಿ ಹಾನಿ ಆಗಿದೆ. ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ದೇವರ ದಯೆದಿಂದ ನಿನ್ನೆಯಿಂದ ಮಳೆ ಕಡಿಮೆ ಆಗಿದೆ. ಇದೇ ರೀತಿ ಇನ್ನೂ 2-3 ದಿನ ಇದ್ದರೆ ಪ್ರವಾಹ ಕಡಿಮೆಯಾಗುವ ವಿಶ್ವಾಸ ಇದೆ. ದೇವರಲ್ಲಿ ಈ ಬಗ್ಗೆ ಪ್ರಾರ್ಥನೆಯನ್ನು ಮಾಡುತ್ತೇನೆ. ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗಿದೆ ಎಂದರು.

ರಾಜೀನಾಮೆ ಕೊಡಲು ಸಿದ್ಧ ಎನ್ನುತ್ತಿರುವ ಬಿಎಸ್ವೈ ನಡೆ ನಿಗೂಢ!

ಸ್ವಾಮೀಜಿ ಸಮಾರಂಭ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಭೆ ಮಾಡುವ ಅವಶ್ಯಕತೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬಗ್ಗೆ ವಿಶ್ವಾಸವಿದೆ ಎಂದರು.

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ತೀರ್ಮಾನವನ್ನೂ ಮಾಡುವುದು ಹೈಕಮಾಂಡ್.
ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡೋಣ ಎಂದು ಹೇಳಿದರು.

ಘಟಪ್ರಭಾ, ಮಲಪ್ರಭಾ, ಕೃಷ್ಣೆಯ ಅಬ್ಬರ: ಬಾಗಲಕೋಟೆ ಜಿಲ್ಲೆಯಲ್ಲಿ ಮುಂದುವರೆದ ಪ್ರವಾಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.