ಯಲ್ಲಮ್ಮನಗುಡ್ಡ (ಬೆಳಗಾವಿ ಜಿಲ್ಲೆ): 'ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ಕೋಟಿಗೂ ಅಧಿಕ ಭಕ್ತಾದಿಗಳು ಭೇಟಿ ನೀಡುತ್ತಾರೆ. ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆ. ಈ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ದೇವಸ್ಥಾನ ಹಾಗೂ ಸುತ್ತಮುತ್ತಲಿನ ಸರ್ಕಾರಿ ಜಮೀನು ಒತ್ತುವರಿ ಆಗದಂತೆ ತಡೆಯಲು ಕಾಂಪೌಂಡ್ ಹಾಕಬೇಕು. ಸದ್ಯಕ್ಕೆ ವ್ಯಾಪಾರ- ವಹಿವಾಟು ಮಾಡುವ ಜನರಿಗೆ ಪ್ರತ್ಯೇಕ ಜಾಗ ಗುರುತಿಸಿ, ಅವರಿಗೆ ಅವಕಾಶ ಕಲ್ಪಿಸಬೇಕು' ಎಂದರು.

'ಪ್ರವಾಸೋದ್ಯಮ ಮಂಡಳಿ ಮತ್ತು ದೇವಸ್ಥಾನ ಮಂಡಳಿ ಸೇರಿಕೊಂಡು ಭಕ್ತಾಧಿಗಳಿಗೆ ವಸತಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಉತ್ತಮ ಸೌಲಭ್ಯ ಒದಗಿಸಿದರೆ ಭಕ್ತಾಧಿಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ. ಸುಲಭ ದರ್ಶನಕ್ಕೆ ಅವಕಾಶ ಕಲ್ಪಿಸುವುದು ಪ್ರಥಮ ಆದ್ಯತೆಯಾಗಿರಬೇಕು' ಎಂದೂ ಹೇಳಿದರು.
.ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಕಪ್ಪು ಬಟ್ಟೆ ಪ್ರದರ್ಶನ.ಯಲ್ಲಮ್ಮನಗುಡ್ಡದಲ್ಲಿ ಕಾಮಗಾರಿಗಳಿಗೆ ಚಾಲನೆ; ಪತ್ನಿ ಹೆಸರಲ್ಲಿ ಪೂಜೆ ಮಾಡಿಸಿದ CM.
'ತಿರುಪತಿ ಮಾದರಿ ಸೌಕರ್ಯಕ್ಕೆ ಸೂಚನೆ'

'ತಿರುಪತಿ ಮಾದರಿಯನ್ನು ಅಧ್ಯಯನ ಮಾಡಿಕೊಂಡು ಅದೇ ಮಾದರಿಯಲ್ಲಿ ಮೂಲಸೌಕರ್ಯ ಕಲ್ಪಿಸಬೇಕು' ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

'₹45 ಕೋಟಿ ಬ್ಯಾಂಕಿನಲ್ಲಿದ್ದು, ವಾರ್ಷಿಕ ಅಂದಾಜು ₹25 ಕೋಟಿ ಆದಾಯ ಬರುತ್ತಿದೆ. ಉತ್ತಮ ಸೌಲಭ್ಯ ಒದಗಿಸುವ ಮೂಲಕ ಭಕ್ತರ ಭೇಟಿಯ ಪ್ರಮಾಣವನ್ನು ಹೆಚ್ಚಿಸಬೇಕು. ಸುಕ್ಷೇತ್ರಗಳಿಗೆ ಭೇಟಿ ನೀಡುವವರು ಬಡವರೇ ಆಗಿದ್ದರೂ ಸಂಪ್ರದಾಯ ಮತ್ತು ಖರ್ಚು ವೆಚ್ಚಕ್ಕೆ ಯೋಚನೆ ಮಾಡುವುದಿಲ್ಲ. ಆದ್ದರಿಂದ ಉತ್ತಮ ಸೌಲಭ್ಯ ಒದಗಿಸಬೇಕು. ಹುಣ್ಣಿಮೆ ಸಂದರ್ಭದಲ್ಲಿ ಚಕ್ಕಡಿಗಳಲ್ಲಿ ಜನರು ಬರುತ್ತಾರೆ. ಅಂತಹ ವೇಳೆ ಜಾನುವಾರುಗಳಿಗೆ ಮೇವು ಬ್ಯಾಂಕ್ ಸ್ಥಾಪಿಸಬೇಕು' ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

'ದಾನಿಗಳು- ಸಂಸ್ಥೆಗಳಿಗೆ ಅವಕಾಶ ಕಲ್ಪಿಸಿ'

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, 'ಸಾಕಷ್ಟು ಜಮೀನು ಲಭ್ಯವಿರುವುದರಿಂದ ವಸತಿ ಮತ್ತಿತರ ಸೌಲಭ್ಯ ಒದಗಿಸಲು ಮುಂದಾಗುವ ದಾನಿಗಳು ಮತ್ತು ಸಂಸ್ಥೆಗಳಿಗೆ ಅವಕಾಶ ಕಲ್ಪಿಸಬೇಕು' ಎಂದು ನಿರ್ದೇಶನ ನೀಡಿದರು.

'ಬರೀ ವಾಣಿಜ್ಯ ದೃಷ್ಟಿಯಿಂದ ನೋಡದೇ ಭಕ್ತಾದಿಗಳಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲರಿಗೂ ಅವಕಾಶ ಒದಗಿಸಬೇಕು. ಸೋಲಾರ್ ಪಾರ್ಕ್, ರೋಪ್ ವೇ ಮತ್ತಿತರ ಯೋಜನೆಗಳನ್ನು ಜಾರಿಗೊಳಿಸಬೇಕು. ಪಿಪಿಪಿ ಮಾದರಿ ಯೋಜನೆಗಳಡಿ ಬಂಡವಾಳ ಹೂಡಿಕೆಗೆ ಮುಂದಾಗುವವರಿಗೆ ಕನಿಷ್ಠ 60 ವರ್ಷ ಗುತ್ತಿಗೆ ನೀಡಬೇಕು' ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, 'ಭಕ್ತಾದಿಗಳು ಪಡ್ಡಲಗಿ ತುಂಬಿಸಿ ಜೋಗತಿಯರಿಗೆ ನೈವೇದ್ಯ ಸಮರ್ಪಿಸುತ್ತಾರೆ. ಜನಸಂದಣಿ ಹೆಚ್ಚಾಗಿರುವಾಗ ದರ್ಶನ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಎಲ್ಲರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು' ಎಂದರು.

'ಕ್ಷೇತ್ರದ ಒಟ್ಟಾರೆ ಅಭಿವೃದ್ಧಿಗೆ ಸರಕಾರದ ವತಿಯಿಂದ ₹25 ಕೋಟಿ ರೂಪಾಯಿ ನೀಡಬೇಕು' ಎಂದೂ ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, 'ಪ್ರವಾಸೋದ್ಯಮ ಮತ್ತು ದೇವಸ್ಥಾನ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು' ಎಂದರು.

ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, 'ಯಲ್ಲಮ್ಮ ಸುಕ್ಷೇತ್ರಕ್ಕೆ ಆಗಮಿಸುವ ಬಹಳಷ್ಟು ಜನರು ಬಡವರು ಹಾಗೂ ಅನಕ್ಷರಸ್ಥರಾಗಿರುತ್ತಾರೆ. ಆದ್ದರಿಂದ ಸ್ವಚ್ಛತೆ, ವಸತಿ ಹಾಗೂ ಸುಗಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ' ಎಂದು ಪ್ರತಿಪಾದಿಸಿದರು.

'ಪಿಪಿಪಿ ಮಾದರಿಯಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು. ಮಹಾರಾಷ್ಟ್ರದ ಭಕ್ತರೊಬ್ಬರು ಎರಡು ಎಕರೆ ಜಾಗೆ ನೀಡಿದರೆ ಮೂರು ಮಹಡಿಯ ವಸತಿ ಸಮುಚ್ಛಯ ಸ್ಥಾಪಿಸಿಕೊಡುವ ಭರವಸೆ ನೀಡಿದ್ದಾರೆ.

ಅದಲ್ಲದೇ ಹರ್ಷ ಶುಗರ್ಸ್ ನಾಲ್ಕೈದು ಎಕರೆ ಜಾಗೆ ನೀಡಿದರೆ ನೂರಾರು ಜನರಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಿದ್ದಾರೆ ಎಂದು ತಿಳಿಸಿದರು.

'ಮೂರು ಸಾವಿರ ಜನರು ಊಟ ಮಾಡಲು ಸರಕಾರದ ವತಿಯಿಂದಲೇ ದಾಸೋಹ ಭವನ ನಿರ್ಮಿಸಿಕೊಡಬೇಕು' ಎಂದೂ ಎಚ್.ಕೆ.ಪಾಟೀಲ ಒತ್ತಾಯಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸಮಗ್ರ ಅಭಿವೃದ್ಧಿ ಯೋಜನೆಯ ರೂಪುರೇಷೆಗಳನ್ನು ಸಭೆಯಲ್ಲಿ ವಿವರಿಸಿದರು.

ಗೌರಿ ಹುಣ್ಣಿಮೆ, ಹೊಸ್ತಿಲ ಹುಣ್ಣಿಮೆ, ಬನದ ಹುಣ್ಣಿಮೆ ಹಾಗೂ ಭರತ ಹುಣ್ಣಿಮೆ ವೇಳೆ ಭಕ್ತರ ಸಂಖ್ಯೆ ಹೆಚ್ಚುತ್ತದೆ. ಆ ಸಂದರ್ಭದಲ್ಲಿ ಸುಗಮ ದರ್ಶನ ಹಾಗೂ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಯೋಜನೆಯನ್ನು ರೂಪಿಸಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಭಾಗಗಳ ಭಕ್ತಾದಿಗಳ ಅನುಕೂಲಕ್ಕಾಗಿ ಸರದಿ ಕಾಂಪ್ಲೆಕ್ಸ್ (ಕ್ಯೂ ಕಾಂಪ್ಲೆಕ್ಸ್), ಅಲ್ಲಿಯೇ ಲಘು ಉಪಾಹಾರ ನೀಡಲು ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಪಡ್ಡಲಗಿ ತುಂಬಲು ನಾಲ್ಕೈದು ಸಾವಿರ ಜನರು ಒಂದೇ ಕಡೆ ಅಡುಗೆ ಮಾಡಲು ಕೊಠಡಿಗಳು, ಎಣ್ಣೆಹೊಂಡದಲ್ಲೂ ಸರದಿ ವ್ಯವಸ್ಥೆ ಹಾಗೂ ರಾಮೇಶ್ವರಂ ಮಾದರಿಯಲ್ಲಿ ಮೇಲಿನಿಂದ ನೀರಿನ ಸಿಂಪರಣೆ ಹಾಗೂ ಸ್ನಾನದ ಬಳಿಕ ಬಟ್ಟೆ ಬದಲಾಯಿಸಲು ಕೂಡ ವ್ಯವಸ್ಥೆ ಮಾಡುವ ಯೋಜನೆಯನ್ನು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, 'ಹುಣ್ಣಿಮೆ ಸಂದರ್ಭದಲ್ಲಿ ಜನದಟ್ಟಣೆ ಹಾಗೂ ಸುಗಮ ಸಂಚಾರ ನಿರ್ವಹಣೆಗೆ ಇಂಟ್ರಾನೆಟ್ ವಾಕಿಟಾಕಿ ವ್ಯವಸ್ಥೆ ಅಗತ್ಯ' ಎಂದು ವಿವರಿಸಿದರು.

ಮುಜರಾಯಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ಶಾಸಕರಾದ ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಆಸಿಫ್ (ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿ.ರಾಜೇಂದ್ರ, ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಸಭೆಯಲ್ಲಿ ಇದ್ದರು.

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಸಿ.ಎಂ ನೀಡಿದ ನಿರ್ದೇಶನಗಳು

ರೇಣುಕಾ ಯಲ್ಲಮ್ಮ ದೇವಿ ಸನ್ನಿಧಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಆದ್ಯತೆಯಲ್ಲಿ ಒದಗಿಸಬೇಕು.

ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಉಳಿಯಲು ಅಚ್ಚುಕಟ್ಟುತನದ ವ್ಯವಸ್ಥೆ ಕಲ್ಪಿಸಬೇಕು.

ಸಮರ್ಪಕ ವ್ಯವಸ್ಥೆ ಕಲ್ಪಿಸಿ ದೇವಿಯ ದರ್ಶನದ ಖಾತ್ರಿಯಾದರೆ ಭಕ್ತರು ಮತ್ತು ಪ್ರವಾಸಿಗರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು.

ಯಲ್ಲಮ್ಮ ದರ್ಶನಕ್ಕೆ ಬಡವರು, ಶ್ರಮಿಕರು, ತಳ ಸಮುದಾಯದವರು, ಮಹಿಳೆಯರು ಮತ್ತು ದುಡಿಯುವ ವರ್ಗದವರೇ ಹೆಚ್ಚಾಗಿ ಬರುವ ಕ್ಷೇತ್ರ ಇದು.

ಸೌಕರ್ಯ ಅಚ್ಚುಕಟ್ಟಾಗಿದ್ದರೆ ಕ್ಷೇತ್ರದ ಆದಾಯವೂ ಹೆಚ್ಚಾಗುತ್ತದೆ. ಈ ಆದಾಯದಿಂದ ಭಕ್ತರಿಗೆ ಇನ್ನೂ ಹೆಚ್ಚಿನ ಮೂಲಭೂತ ಸವಲತ್ತು ಒದಗಿಸಬಹುದು. ಕ್ಷೇತ್ರವನ್ನೂ ಆಕರ್ಷಣೀಯ ಮಾಡಬೇಕು.

ಎತ್ತಿನಗಾಡಿಯಲ್ಲಿ ಅತಿ ಹೆಚ್ಚು ಪ್ರಮಾಣದ ಭಕ್ತರು ಆಗಮಿಸುವುದರಿಂದ ಕಾರು, ಬೈಕುಗಳ ಜೊತೆಗೆ ಎತ್ತಿನಗಾಡಿ ನಿಲ್ಲಿಸಲು ವ್ಯವಸ್ಥೆ ಕಲ್ಪಿಸಬೇಕು. ಎತ್ತುಗಳಿಗೆ ಉತ್ತಮ ಮೇವು- ನೀರು- ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಪೂರಕವಾಗಿ ಕಾರ್ಯಯೋಜನೆ ರೂಪಿಸಬೇಕು.

ಪ್ರತೀ ವರ್ಷ 1.5 ರಿಂದ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆಯನ್ನು ರೂಪಿಸಬೇಕು.

ಕ್ಷೇತ್ರಕ್ಕೆ ಸೇರಿದ ಜಾಗ, ಜಮೀನನ್ನು ಮೊದಲು ಗುರುತಿಸಿ, ಒತ್ತುವರಿ ಆಗಿದ್ದರೆ ಬಿಡಿಸಿಕೊಳ್ಳಬೇಕು. ಸ್ಥಳದ ಸುತ್ತ ಕಾಂಪೌಂಡ್, ಫೆನ್ಸಿಂಗ್ ಹಾಕಿ ಜಾಗದ ಭದ್ರತೆ ಮಾಡಿಕೊಳ್ಳಬೇಕು.

ಭಕ್ತರು ಬರುವ ದೇವಸ್ಥಾನದ ಮಾರ್ಗ ಮತ್ತು ಸುತ್ತಲ ಪ್ರದೇಶಗಳಲ್ಲಿ ಹಾಗೂ ಭಕ್ತರು ಉಳಿಯುವ ಜಾಗದಲ್ಲಿ ಬೀದಿ ದೀಪ, ವಿದ್ಯುತ್ ಸೌಲಭ್ಯ ಒದಗಿಸಬೇಕು.

ರೋಪ್ ವೇ ಸವಲತ್ತು ಕಲ್ಪಿಸುವುದರಿಂದ ಅನುಕೂಲ ಆಗುತ್ತದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.