ಬೆಳಗಾವಿ: ‘ದೆಹಲಿಯ ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರೆಂದು ಆರೋಪಿಸಿರುವ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ’ ಎಂದು ವಕೀಲ ಹರ್ಷವರ್ಧನ ಪಾಟೀಲ ತಿಳಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ರೈತರೇ ಅಲ್ಲ. ಅವರು ಭಯೋತ್ಪಾದಕರು ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ. ಹೀಗಾಗಿ, ಅವರ ವಿರುದ್ಧ ನಾನು ಫೆ. 6ರಂದು ಕೊಟ್ಟಿರುವ ದೂರು ಆಧರಿಸಿ ಎಫ್ಐರ್ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

‘ತನಿಖೆ ನಂತರವೆ ದೂರು ದಾಖಲಿಸಿಕೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ. 24 ಗಂಟೆಗಳೊಳಗೆ ದೂರು ದಾಖಲಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ, ಕಂಗನಾ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುತ್ತೇನೆ. ಅವರ ಟ್ವಿಟರ್ ಖಾತೆಯನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.