ಬೆಳಗಾವಿ: ‘ನನಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿರುವ ಬಗ್ಗೆ ಗೊತ್ತಿಲ್ಲ. ಹಾಗೊಂದು ವೇಳೆ ನನಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಂದೆ ಬಂದರೆ, ನನ್ನ ಹಿತೈಷಿಗಳು ಹಾಗೂ ಬೆಂಬಲಿಗರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳುವೆ’ ಎಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ತಿಳಿಸಿದರು.

‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಲವು ವರ್ಷಗಳ ಸ್ನೇಹವಿದೆ. ಹೀಗಾಗಿ ಮೊನ್ನೆ ಬೆಂಗಳೂರಿನಲ್ಲಿ ಅವರನ್ನು ಭೇಟಿಯಾಗಿದ್ದೆ. ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯಲು ಅಲ್ಲ’ ಎಂದು ಹೇಳಿದರು.

‘ಬಿಜೆಪಿ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ಟಿಕೆಟ್ ನೀಡಿದರೆ ಗೋಕಾಕ ಉಪಚುನಾವಣೆಯಲ್ಲಿ ಸ್ಪರ್ಧಿಸುವೆ. ಸರ್ಕಾರ ನೀಡಿರುವ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಸ್ವೀಕರಿಸುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ’ ಎಂದು ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.