ಎಂ.ಕೆ.ಹುಬ್ಬಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕ, ಮಲಪ್ರಭಾ ನದಿಗೆ ತೆರಳುವ ಮಾರ್ಗದಲ್ಲಿ ಗುರುವಾರ ನಸುಕಿನಲ್ಲಿ ಹಸುವೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಹಸುವಿನ ಕತ್ತಿನ ಕೆಳಭಾಗವನ್ನು ಕತ್ತರಿಸಿದ್ದು, ರಸ್ತೆ ಪಕ್ಕದಲ್ಲಿ ಎಸೆಯಲಾಗಿದೆ.

ಗುರುವಾರ ಬೆಳಿಗ್ಗೆ ವಾಯು ವಿಹಾರಿಗಳು ಇತ್ತ ಬಂದಾಗ ಹಸುವಿನ ಶವ ಪತ್ತೆಯಾಗಿದೆ. ಕೆಲವು ಜನ ಸೇರಿಕೊಂಡು ಹೆದ್ದಾರಿ ಪಕ್ಕದಲ್ಲೇ ತಗ್ಗು ತೆಗೆದು ಹೂತಿದ್ದಾರೆ. ಆದರೆ, ಗುರುವಾರ ಸಂಜೆಯವರೆಗೂ ಹಸುವಿನ ಮಾಲೀಕರು ಯಾರು ಎಂಬುದು ಗೊತ್ತಾಗಿಲ್ಲ. ಯಾರೂ ಪೊಲೀಸರಿಗೆ ದೂರು ಕೂಡ ಸಲ್ಲಿಸಿಲ್ಲ.

‘ಹಸು ಸತ್ತ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಪಿಎಸ್‌ಐ ರಾಜು ಮಮದಾಪುರ ತಿಳಿಸಿದರು.

ಹಸುವಿನ ಹೊಟ್ಟೆ ಭಾಗದಲ್ಲಿ ಕಪ್ಪು ಮಸಿಯಿಂದ ‘A’ ಎಂಬ ಅಕ್ಷರ ಬರೆಯಲಾಗಿತ್ತು. ಹಾಗಾಗಿ, ಇದು ಕಸಾಯಿ ಖಾನೆಗೆ ಸಾಗಿಸಿದ ಹಸು ಇರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.