ಬೆಳಗಾವಿ: ತಾಲ್ಲೂಕಿನ ಕಳ್ಯಾಳ್ ಬಳಿ ಅಪಘಾತದಲ್ಲಿ ಮೃತಪಟ್ಟ ಏಳೂ ಜನರ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಸರ್ಕಾರದಿಂದ ನೀಡಲಾಗುವುದು. ಅಲ್ಲದೇ, ಜಿಲ್ಲಾಡಳಿತದಿಂದ ಕೂಡ ತಲಾ ₹ 2 ಲಕ್ಷ ಕೊಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜವಳಿ ಮಳಿಗೆ ಉದ್ಘಾಟನೆಗಾಗಿ ಭಾನುವಾರ ವಿಶೇಷ ವಿಮಾನದ ಮೂಲಕ ನಗರಕ್ಕೆ ಬಂದ ಅವರು, ಅಪಘಾತ ಕುರಿತು ದುಃಖ ವ್ಯಕ್ತಪಡಿಸಿದರು.

ದುಡಿಯುವ ಜನ ಮೃತಪಟ್ಟಿದ್ದು ಅತೀವ ದುಃಖದ ಸಂಗತಿ. ಇದು ದೊಡ್ಡ ಅನಾಹುತ. ಘಟನೆಯಲ್ಲಿ ಗಾಯಗೊಂಡವರಿಗೂ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಚಿಕಿತ್ಸೆ ಕೊಡಿಸಲಾಗುವುದು ಎಂದರು.

ಇದನ್ನೂ ಓದಿ:ಬೆಳಗಾವಿಯಲ್ಲಿ ಕ್ರೂಸರ್ ವಾಹನ ಪಲ್ಟಿ: ಏಳು ಕಾರ್ಮಿಕರು ಸ್ಥಳದಲ್ಲೇ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.