ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ರಾಯಬಾಗ ತಾಲ್ಲೂಕಿನ ಮುಗಳಖೋಡದ ದಲಿತ ಯುವಕ ಮಹಾಂತೇಶ ಕುರಾಡೆ ಅವರಿಗೆ ಅದೇ ಸಮುದಾಯದವರು ಬಹಿಷ್ಕಾರ ಹಾಕಿದ್ದಾರೆ.

‘ಲೋಕಸಭಾ ಚುನಾವಣೆಯಲ್ಲಿ ನಾನು ಬಿಜೆಪಿ ಪರವಾಗಿ ಕೆಲಸ ಮಾಡಿದ್ದೆ. ಇದರಿಂದ ನಮ್ಮ ಸಮುದಾಯದ ಕೆಲವು ಮುಖಂಡರಿಗೆ ಸಿಟ್ಟು ಬಂದಿತು. ನನ್ನ ಜೊತೆ ಯಾವುದೇ ವ್ಯವಹಾರ ಮಾಡದಂತೆ ಹಾಗೂ ನನ್ನ ಕಿರಾಣಿ ಅಂಗಡಿಯಿಂದ ಯಾವುದೇ ಸಾಮಾನು ಖರೀದಿಸದಂತೆ ಬಹಿಷ್ಕಾರ ಹಾಕಿದ್ದಾರೆ’ ಎಂದು ಮಹಾಂತೇಶ ಕುರಾಡೆ ಸುದ್ದಿಗಾರರಿಗೆ ತಿಳಿಸಿದರು.

‘ಇದುವರೆಗೆ ಇಲ್ಲಿನ ಕಾಂಗ್ರೆಸ್ ಮುಖಂಡರು ಯಾವುದೇ ಅಭಿವೃದ್ಧಿ ಮಾಡಿಲ್ಲ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಅಭಿವೃದ್ಧಿ ಮಾಡುತ್ತಾರೆಂದು ಬಿಜೆಪಿ ಪರವಾಗಿ ಕೆಲಸ ಮಾಡಿದ್ದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.