ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಶಿಷ್ಟಾಚಾರ ಪಾಲನೆ ಸೇರಿದಂತೆ ಪ್ರತಿಯೊಂದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು’
ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚನೆ ನೀಡಿದರು.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಕುರಿತು ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ಬುಧವಾರ ನಡೆದ ವಿಡಿಯೊ ಸಂವಾದ ಮೂಲಕ ಅವರು ಮಾತನಾಡಿದರು.

‘ಪ್ರಧಾನಮಂತ್ರಿಗಳ ಕಾರ್ಯಾಲಯದ ನಿರ್ದೇಶನದಂತೆ ಭದ್ರತಾ ವ್ಯವಸ್ಥೆ, ಶಿಷ್ಟಾಚಾರ ಹಾಗೂ ವೇದಿಕೆ ನಿರ್ಮಾಣ ಸೇರಿದಂತೆ ಪ್ರತಿಯೊಂದು ಕೆಲಸವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು’ ಎಂದರು.

‘ಅಂತಿಮ ಕಾರ್ಯಕ್ರಮಪಟ್ಟಿಯ ಪ್ರಕಾರ ಕೊನೆಯಕ್ಷಣದಲ್ಲಿ ಕೆಲವು ಮಾರ್ಪಾಡು ಆಗಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.

‘ತುರ್ತು ವೈದ್ಯಕೀಯ ಸೌಲಭ್ಯ, ಭದ್ರತೆ ಮತ್ತು ಸಂಚಾರ ನಿರ್ವಹಣೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪ್ರಧಾಮಂತ್ರಿಗಳ ಕಾರ್ಯಾಲಯ ಹಾಗೂ ಎಸ್.ಪಿ.ಜಿ. ಅಧಿಕಾರಿಗಳ ತಂಡದ ನಿರ್ದೇಶನದ ಅನ್ವಯ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾ
ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ ಮತ್ತಿತರರು ಇದ್ದರು.

ಬಳಿಕ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಪ್ರಧಾನಿ ಕಾರ್ಯಕ್ರಮಗಳಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ. ಪಾರ್ಕಿಂಗ್ ಮತ್ತು ಊಟದ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕಿದೆ’ ಎಂದರು.

‘ಇದಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ಅಧಿಕಾರಿಗಳು
ತಮಗೆ ವಹಿಸಲಾದ ಜವಾಬ್ದಾರಿಗಳನ್ನು ನಿಭಾಯಿಸಬೇಕು’ ಎಂದು ಹೇಳಿದರು.

‘ತುರ್ತು ವೈದ್ಯಕೀಯ ಸೌಲಭ್ಯ, ಶುದ್ಧ ಕುಡಿಯುವ ನೀರು, ಮೊಬೈಲ್ ಶೌಚಾಲಯ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಉಪ ವಿಭಾಗಾಧಿಕಾರಿ ಬಲರಾಮ್ ಚವಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.