ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ರಾಗಿ ಆರ್.ಎಸ್. ಸೀತಾರಾಮು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಸೀತಾರಾಮು ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮುಂಬಡ್ತಿ ನೀಡಿ ಆದೇಶಿಸಿದೆ.

ಕಳೆದ ಒಂದು ತಿಂಗಳಿನಿಂದ ಪ್ರಭಾr ಡಿಡಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಮೇಕನಮರಡಿ ಅಧಿಕಾರ ಹಸ್ತಾಂತರಿಸಿದರು. ಚಿಕ್ಕೋಡಿ ಹಾಗೂ ಬೆಳಗಾವಿ ಅವಳಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಬ್ಬರೇ ಡಿಡಿಪಿಐ ಕರ್ತವ್ಯ ನಿರ್ವಹಿಸುತ್ತಿದ್ದ ಕುರಿತು ಪ್ರಜಾವಾಣಿ ಹಲವು ಬಾರಿ ವರದಿ ಮಾಡಿ ಸರ್ಕಾರದ ಗಮನ ಸೆಳೆದಿತ್ತು.

ಕಳೆದ ಒಂದು ತಿಂಗಳ ಹಿಂದೆ ಬೆಳಗಾವಿ ಶೈಕ್ಷಣಿಕ ಜಿಲ್ಲೆಗೆ ನೂತನ ಡಿಡಿಪಿಐ ನಿಯೋಜನೆ ಮಾಡಲಾಗಿತ್ತು. ಇದೀಗ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ನೂತನ ಡಿಡಿಪಿಐ ನಿಯೋಜನೆ ಮಾಡಿದ್ದು ಈ ಭಾಗದಲ್ಲಿ ಶೈಕ್ಷಣಿಕ ಚಟುವಟಿಕೆಗಳು ಗರಿಗೆದರಲು ಅನುಕೂಲವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.