ಅಥಣಿ: ‘ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ. ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನನಗೆ ಕ್ಷೇತ್ರದ ಅಭಿವೃದ್ಧಿಯಷ್ಟೆ ಮುಖ್ಯ. ಮನುಷ್ಯ ಎಂದ ಮೇಲೆ ಸಹಜವಾಗಿಯೇ ಆಸೆ ಇರುತ್ತದೆ’ ಎಂದು ಶಾಸಕ ಮಹೇಶ್ ಕುಮಠಳ್ಳಿ ಪರೋಕ್ಷವಾಗಿ ಮಂತ್ರಿ ಸ್ಥಾನದ ಆಸೆ ವ್ಯಕ್ತಪಡಿಸಿದರು.

ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ₹ 94 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚುವರಿಯಾಗಿ ₹ 400 ಕೋಟಿ ಬೇಕಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಥಣಿ ಮೇಲೆ ಕಾಳಜಿಯಿಂದ ಹೆಚ್ಚಿನ ಅನುದಾನ ನೀಡಿದ್ದಾರೆ. ಕೃಷಿ ಕಾಲೇಜು ಘೋಷಿಸಿದ್ದಾರೆ’ ಎಂದರು.

‘ಸಚಿವ ಸ್ಥಾನದ ವಿಷಯದಲ್ಲಿ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ಥೇನೆ’ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಸಿದ್ದಪ್ಪ ಮುದಕಣ್ಣವರ, ನಿಂಗಪ್ಪ ನಂದೇಶ್ವರ, ಬಸವರಾಜ ಯಡೂರ, ಲೋಕಪಯೋಗಿ ಇಲಾಖೆ ಅಧಿಕಾರಿ ಜಿ.ಎಂ. ಹೀರೆಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.