‘ಆರ್.ಸಿಟಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಈಗಾಗಲೇ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಗ್ರಾಮೀಣ ಭಾಗದ ಯುವಕ– ಯುವತಿಯರಿಗೆ ಹೈನುಗಾರಿಕೆ ಕುರಿ ಸಾಕಣೆ ಬ್ಯೂಟಿ ಪಾರ್ಲರ್ ಸೇರಿದಂತೆ ವಿವಿಧ ವೃತ್ತಿಪರ ತರಬೇತಿಗಳನ್ನು ನೀಡಲಾಗುತ್ತದೆ. ಈಗಾಗಲೇ ನಿಗದಿಪಡಿಸಿದ ಗುರಿಗಿಂತ ಹೆಚ್ಚು ಪ್ರಮಾಣದ ಗುರಿ ಸಾಧಿಸಲಾಗಿದೆ’ ಎಂದು ಕೆನರಾ ಬ್ಯಾಂಕ್ ಆರ್.ಸಿಟಿ ನಿರ್ದೇಶಕ ಸಿದ್ದನಗೌಡ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ‘ಸ್ವ ಉದ್ಯೋಗ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಜಿಲ್ಲೆಯ ಎಲ್ಲ ಭಾಗಗಳಲ್ಲಿ ತರಬೇತಿ ನೀಡುವ ಕುರಿತು ಯೋಜನೆ ರೂಪಿಸಬೇಕು. ತರಬೇತಿ ಕಾರ್ಯಾಗಾರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ತಲುಪಲು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು’ ಎಂದು ತಿಳಿಸಿದರು.
ಬ್ಯಾಂಕುಗಳಲ್ಲಿ ಗ್ರಾಹಕರೊಂದಿಗೆ ಕಡ್ಡಾಯವಾಗಿ ಕನ್ನಡದಲ್ಲೇ ಮಾತನಾಡಬೇಕು. ಅರ್ಜಿ ಮಾಹಿತಿ ಎಲ್ಲ ವ್ಯವಹಾರಗಳನ್ನು ಕನ್ನಡಲ್ಲೇ ನಡೆಸಬೇಕು