ಬೆಳಗಾವಿ: ಇಲ್ಲಿನ ಕೆಎಲ್ಎಸ್–ಗೋಗಟೆ ತಾಂತ್ರಿಕ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಡೀನ್ ಡಾ.ಕೃಷ್ಣಶೇಖರ್ ಲಾಲ್ ದಾಸ್ ಅವರು ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ನಡೆಸಿದ ಶೈಕ್ಷಣಿಕ ನಾಯಕತ್ವ ಕಾರ್ಯಕ್ರಮದಲ್ಲಿ ಪ್ರಶಂಸಾಪತ್ರ ಪಡೆದಿದ್ದಾರೆ.

‘ಪ್ರಪಂಚದಾದ್ಯಂತದ ಶೈಕ್ಷಣಿಕ ನಾಯಕರು 10 ವಾರಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಓದುವಿಕೆ ಮತ್ತು ಹಿನ್ನೆಲೆ ಸಂಶೋಧನೆ, ಚುರುಕಾದ ಗುರಿಗಳನ್ನು ಹೊಂದಿಸುವುದು, ನೆಟ್ವರ್ಕಿಂಗ್, ಶೈಕ್ಷಣಿಕ ಸಮಸ್ಯೆಗಳಿಗೆ ಕಾರ್ಯಸಾಧ್ಯವಾದ ಪರಿಹಾರಗಳನ್ನು ಒದಗಿಸುವುದು ಮತ್ತು ಪಾಠಗಳನ್ನು ವಿನ್ಯಾಸಗೊಳಿಸುವ ಚಟುವಟಿಕೆಗಳನ್ನು ಕಾರ್ಯಕ್ರಮ ಒಳಗೊಂಡಿತ್ತು. ಅವರನ್ನು ಕೆಎಲ್ಎಸ್ ಅಧ್ಯಕ್ಷ ಎಂ.ಆರ್. ಕುಲಕರ್ಣಿ ಮತ್ತು ಪ್ರಾಂಶುಪಾಲ ಡಾ.ಜಯಂತ್ ಕಿತ್ತೂರು ಅಭಿನಂದಿಸಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.