ಬೆಳಗಾವಿ: ‘ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ನಿಗಾ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬರ ನಿರ್ವಹಣೆ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ವಹಿಸಬೇಕು. ಸಮಸ್ಯೆ ಇರುವ ಕಡೆ ತಕ್ಷಣವೇ ನೀರು ಪೂರೈಸಬೇಕು. ಅಗತ್ಯವಿರುವ ಕಡೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಬೇಕು’ ಎಂದರು.

‘ಬರ ನಿರ್ವಹಣೆಗಾಗಿ ತಾಲ್ಲೂಕುಮಟ್ಟದಲ್ಲಿ ತಹಶೀಲ್ದಾರರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜತೆ ಸಮನ್ವಯ ಸಭೆ ನಡೆಸಬೇಕು. ಕುಡಿಯುವ ನೀರು ಹಾಗೂ ಮೇವಿನ ಕೊರತೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.

‘ಜಿಲ್ಲೆಯಲ್ಲಿ ಸದ್ಯ ಮೇವಿನ ಕೊರತೆ ಇಲ್ಲ. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನಿಗಾ ವಹಿಸಬೇಕು’ ಎಂದೂ ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಉಪಸ್ಥಿತರಿದ್ದರು.

ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುವ ವಿಚಾರವಾಗಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸಬೇಕು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಬೇಕು.
-ನಿತೇಶ್ ಪಾಟೀಲ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.