ಬೆಳಗಾವಿ: ಕೇಂದ್ರ ಬರ ಅಧ್ಯಯನ ತಂಡವು ತಮ್ಮ ಸಮಸ್ಯೆ ಆಲಿಸಲಿಲ್ಲ ಎಂದು ಆಪಾದಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಕಲಕುಪ್ಪಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆಯಿತು.

ಅಪ್ಪಾಸಾಹೇಬ ಲಕ್ಕುಂಡಿ ಆತ್ಮಹತ್ಯೆಗೆ ಯತ್ನಿಸಿದವರು.

ಅಧಿಕಾರಿಗಳು ಕಲಕುಪ್ಪಿಯಲ್ಲಿ ಕೆಲವು ರೈತರ ಸಂಕಷ್ಟ ಆಲಿಸಿ, ಸವದತ್ತಿ ತಾಲ್ಲೂಕಿನ ಚಚಡಿಯತ್ತ ಹೊರಟರು. ಈ ವೇಳೆ ರೈತ ಕೀಟನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ. ಸ್ಥಳದಲ್ಲಿದ್ದ ಪೊಲೀಸರು ಆತನಿಂದ ಕೀಟನಾಶಕ ಬಾಟಲಿ ಕಸಿದುಕೊಂಡರು.

'ನಾನು 40 ಎಕರೆ ಭೂಮಿಯಲ್ಲಿ ಶೇಂಗಾ, ಹುರಳಿ, ಸೋಯಾಬೀನ್ ಬೆಳೆದಿದ್ದೇನೆ. ಮಳೆ ಕೊರತೆಯಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಆದರೆ, ಯಾರೂ ರೈತರ ಕಷ್ಟ ಕೇಳುತ್ತಿಲ್ಲ. ಸರ್ಕಾರ ಯಾವ ಗ್ಯಾಂರಟಿ ನೀಡದ್ದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದೆ. ಸರ್ಕಾರ ರೈತರ ನೆರವಿಗೆ ಧಾವಿಸಬೇಕು' ಎಂದು ರೈತ ಅಪ್ಪಾಸಾಹೇಬ ಲಕ್ಕುಂಡಿ ಸುದ್ದಿಗಾರರಿಗೆ ತಿಳಿಸಿದರು.
.ಬೆಳಗಾವಿ | ಕೇಂದ್ರ ತಂಡದಿಂದ ಬರ ಅಧ್ಯಯನ ಆರಂಭ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.