ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕಾಂಗ್ರೆಸ್‌– ಬಿಜೆಪಿ ಕಾರ್ಯಕರ್ತರ ಜಟಾಪಟಿ

Published 5 ಮೇ 2024, 6:37 IST
Last Updated 5 ಮೇ 2024, 6:37 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಶಹಾಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ.

ವಿಷಯ ತಿಳಿದು ಠಾಣೆಗೆ ತೆರಳಿದ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಕಾಂಗ್ರೆಸ್‌ ಕಾರ್ಯಕರ್ತರ ಪರ ನಿಂತರು. ಕೆಲವೇ ನಿಮಿಷಗಳಲ್ಲಿ ಶಾಸಕ ಅಭಯ ಪಾಟೀಲ ಕೂಡ ಠಾಣೆಗೆ ಬಂದು, ಬಿಜೆಪಿ ಕಾರ್ಯಕರ್ತರ ಪರ ವಾದಕ್ಕೆ ನಿಂತರು.

ಅಭಯ ಬಂದ ನಂತರ ಚನ್ನರಾಜ ಹೊರ ನಡೆದರು. ಅವರ ಕಾರು ಹೋಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ನಂತರ ಪೊಲೀಸರು ಎಲ್ಲರನ್ನೂ ಚದುರಿಸಿದರು.

ಗೋಕಾಕ ವರದಿ: ಗೋಕಾಕ ವಿಧಾನಸಭೆ ಕ್ಷೇತ್ರದ ಅಂಕಲಗಿಯಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದಡಿ ಶನಿವಾರ ಕೆಲವರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದರು. ಇದರ ವಿಡಿಯೊಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದರು.

‘₹1.76 ಲಕ್ಷ ವಶಪಡಿಸಿಕೊಂಡಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆರೋಪಿಗಳು ಸುಮಾರು ₹25 ಲಕ್ಷ  ಹಣ ಹಂಚುತ್ತಿದ್ದರು ಎಂದು ಬಿಜೆಪಿಯವರು ಆರೋಪಿಸಿದ್ದಾರೆ.

‘ಈ ಸಂಬಂಧ ದೂರು ದಾಖಲಿಸಿ, ತನಿಖೆ ಕೈಗೊಳ್ಳಲಾಗುತ್ತಿದೆ’ ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT