ಬೆಳಗಾವಿ: ಬೆಳಗಾವಿಯೂ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಮಹಿಳಾ ಸೈನಿಕರ (ಮಿಲಿಟರಿ ಪೊಲೀಸ್) ನೇಮಕಾತಿ ರ್ಯಾಲಿಯನ್ನು ಇದೇ 22ರಿಂದ ಆರು ದಿನಗಳ ಕಾಲ ಆಯೋಜಿಸಲಾಗಿದೆ.

ಇಲ್ಲಿನ ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ‘ಬೆಳಗಾವಿಯ ಮರಾಠಾ ಲಘು ಪದಾತಿ ದಳ ಕೇಂದ್ರದ ಆವರಣದಲ್ಲಿರುವ ಶಿವಾಜಿ ಕ್ರೀಡಾಂಗಣದಲ್ಲಿ ರ್ಯಾಲಿ ನಡೆಯಲಿದೆ’ ಎಂದು ಹೇಳಿದರು.

‘ಅಭ್ಯರ್ಥಿಗಳು ಸಲ್ಲಿಸುವ ಜಾತಿ ಪ್ರಮಾಣಪತ್ರಗಳು ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳನ್ನು ತಾತ್ಕಾಲಿಕವಾಗಿ ಪರಿಶೀಲನೆ ನಡೆಸಲು ಕಂದಾಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇನಾಧಿಕಾರಿಗಳಿಗೆ ಸಹಾಯ ಮಾಡಲಿದ್ದಾರೆ. ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಬಸ್ ಹಾಗೂ ರೈಲು ನಿಲ್ದಾಣದಲ್ಲಿ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು’ ಎಂದು ತಿಳಿಸಿದರು.

‘ನೇಮಕಾತಿ ವೇಳೆ ನೂಕುನುಗ್ಗಲು ಉಂಟಾಗದಂತೆ ನಿಯಂತ್ರಿಸಲು ಸ್ಥಳೀಯ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು, ಅಭ್ಯರ್ಥಿಗಳಿಗೆ ಪಾವತಿ ಆಧಾರದ ಮೇಲೆ ಉಪಾಹಾರ ಒದಗಿಸುವುದು ಸೇರಿದಂತೆ ಒಟ್ಟಾರೆ ನೇಮಕಾತಿ ಪ್ರಕ್ರಿಯೆ ಸುಸೂತ್ರವಾಗಿ ನಡೆಸಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಎರಡು ಅಂಬುಲೆನ್ಸ್, ವೈದ್ಯರು, ವೈದ್ಯಕೀಯ ಸಿಬ್ಬಂದಿ, ತಪಾಸಣಾ ಯಂತ್ರೋಪಕರಣಗಳು ಹಾಗೂ ಅಗತ್ಯ ಔಷಧಿಗಳನ್ನು ಆರೋಗ್ಯ ಇಲಾಖೆಯ ವತಿಯಿಂದ ಒದಗಿಸಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ವಿವರಿಸಿದರು.

ರ್ಯಾಲಿಯಲ್ಲಿ ರಾಜ್ಯದವರ ಜೊತೆಗೆ ನೆರೆಯ ಮಹಾರಾಷ್ಟ್ರ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಅಭ್ಯರ್ಥಿಗಳು ಭಾಗವಹಿಸುವರು. ರ್ಯಾಲಿಯಲ್ಲಿ ಸುಮಾರು 4,000 ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸೇನಾ ನೇಮಕಾತಿ ಅಧಿಕಾರಿ ಕರ್ನಲ್ ಪ್ರಣೀತ್ ದಯಾಳ್ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಎಚ್.ಬಿ., ಸ್ಟೇಷನ್ ಕಮಾಂಡರ್ ಬಿ.ಎಸ್ ಘಿವಾರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಈಶ್ವರ ಕುಡೊಳ್ಳಿ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.