ಬೆಳಗಾವಿ: ಅರಣ್ಯ ಇಲಾಖೆ ದಿನಗೂಲಿ ನೌಕರರ ಶೋಷಣೆ ಮತ್ತು ನಿಂದನೆ ಕೈಬಿಡಬೇಕು ಹಾಗೂ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅರಣ್ಯ ಇಲಾಖೆಯ ಸರ್ಕಾರಿ ದಿನಗೂಲಿ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ನೌಕರರ ಸಂಘಟನೆಯವರು ಬೆಳಗಾವಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಮುಷ್ಕರ ನಡೆಸಿದರು.

‘ದಿನಗೂಲಿ ನೌಕರರಾದ ನಮ್ಮನ್ನು ಶೋಷಿಸಲಾಗುತ್ತಿದೆ. ಅಧಿಕಾರಿಗಳು ನಮ್ಮ ಮೇಲೆ ಅವ್ಯಾಚ್ಯ ಶಬ್ದಗಳನ್ನು ಬಳಸುತ್ತಾರೆ’ ಎಂದು ದೂರಿದರು.

ಸಂಘಟನೆಯ ಅಧ್ಯಕ್ಷೆ ಹೇಮಾವತಿ ಮಾತನಾಡಿ, ‘ದಿನಗೂಲಿ ನೌಕರರಿಗೆ 8 ಗಂಟೆ ಕೆಲಸ ನಿಗದಿಪಡಿಸಬೇಕು. ವಾರದ ರಜೆ ಕಡ್ಡಾಯಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಪ್ರತಿ ತಿಂಗಳು 5ರ ಒಳಗೆ ವೇತನ ಪಾವತಿಸಬೇಕು. ಸಮವಸ್ತ್ರ ಮತ್ತು ಗುರುತಿನ ಚೀಟಿ ವಿತರಿಸಬೇಕು. ನಾಲ್ಕೈದು ವರ್ಷ ಕೆಲಸ ನಿರ್ವಹಿಸಿರುವ ನೌಕರರನ್ನು ವಿನಾಕಾರಣ ಕೆಲಸದಿಂದ ತೆಗೆಯಬಾರದು. 10 ವರ್ಷ ಕೆಲಸ ಮಾಡಿದವರಿಗೆ ಕನಿಷ್ಠ ₹ 1 ಸಾವಿರ ಹೆಚ್ಚುವರಿ ವೇತನ ನೀಡಬೇಕು. ಕ್ಷೇಮಾಭಿವೃದ್ಧಿ ಅಧಿನಿಯಮದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ ಪಾಟೀಲ, ‘ನೌಕರರ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸುತ್ತೇವೆ. ಕೆಲ ಬೇಡಿಕೆಗಳು ಹಿರಿಯ ಅಧಿಕಾರಿಗಳ ವ್ಯಾಪ್ತಿಗೆ ಬರುತ್ತದೆ. ಅವರ ಗಮನಕ್ಕೆ ತರಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.