ಬೆಳಗಾವಿ: ತಾಲ್ಲೂಕಿನ ಪೀರನವಾಡಿಯಲ್ಲಿ ಹಚ್ಚ ಹಸಿರಿನ ಪರಿಸರದಲ್ಲಿ ತಲೆ ಎತ್ತಿದ ಭವ್ಯವಾದ ಗಾಂಧಿ ಭವನ ಜೂ.27ರಂದು(ಸೋಮವಾರ) ಲೋಕಾರ್ಪಣೆಗೊಳ್ಳಲಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಈ ಕಟ್ಟಡವನ್ನು ಸಂಜೆ 4 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸುವರು. ದಕ್ಷಿಣ ಶಾಸಕ ಅಭಯ ಪಾಟೀಲ ಅಧ್ಯಕ್ಷತೆ ವಹಿಸುವರು.

ಏನೀದರ ವಿಶೇಷ?: ₹3 ಕೋಟಿ ವೆಚ್ಚದಲ್ಲಿ ಎರಡು ಎಕರೆಯಲ್ಲಿ ಗಾಂಧಿ ಭವನ ನಿರ್ಮಿಸಲಾಗಿದೆ. ಇದರಲ್ಲಿ ಧ್ಯಾನ, ಪ್ರಾರ್ಥನೆಗೆ ಅನುಕೂಲವಾಗುವಂತೆ 100ಕ್ಕೂ ಹೆಚ್ಚು ಜನರು ಕುಳಿತುಕೊಳ್ಳಬಹುದಾದ ಸಭಾಂಗಣವಿದೆ.

‘ಗಾಂಧಿ ಅವರ ಹೋರಾಟದ ಬದುಕು, ಸತ್ಯದ ಅನ್ವೇಷಣೆ, ಅಹಿಂಸಾ ಮಾರ್ಗದ ಜೀವನದ ವಿವಿಧ ಮಗ್ಗುಲುಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ಪರಿಚಯಿಸಲು ಪ್ರದರ್ಶನ ಕೊಠಡಿ ನಿರ್ಮಿಸಲಾಗಿದೆ. ಗಾಂಧೀಜಿ ಸಮಗ್ರ ಜೀವನದ ಮೇಲೆ ಬೆಳಕು ಚೆಲ್ಲುವಂತಹ ಪುಸ್ತಕಗಳು ಮತ್ತು ಸಂಶೋಧನಾ ಕೃತಿಗಳನ್ನು ಜನರಿಗೆ ಸುಲಭವಾಗಿ ದೊರಕಿಸುವುದಕ್ಕಾಗಿ ಕಿರು ಗ್ರಂಥಾಲಯ ಸ್ಥಾಪನೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಭವನದ ಹೊರ ಆವರಣದಲ್ಲಿ ಗಾಂಧಿ ಅವರ ಧ್ಯಾನಸ್ಥ ಬೃಹತ್ ಪುತ್ಥಳಿ, ಪ್ರವೇಶದ್ವಾರದ ಎದುರಿನಲ್ಲಿ ಇನ್ನೊಂದು ಕಂಚಿನ ಪುತ್ಥಳಿ ಸ್ಥಾಪಿಸಲಾಗಿದೆ. ಆವರಣದ ಇನ್ನೊಂದು ಬದಿಯಲ್ಲಿ ಗಾಂಧಿ ನೇತೃತ್ವದಲ್ಲಿ ನಡೆದ ದಂಡಿ ಯಾತ್ರೆಯ ದೃಶ್ಯವನ್ನು ಪ್ರತಿಬಿಂಬಿಸುವ ಆಕರ್ಷಕ ಪುತ್ಥಳಿ ತಲೆ ಎತ್ತಿದೆ’ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ತಿಳಿಸಿದ್ದಾರೆ.

‘ಶಾಸಕ ಅಭಯ ಪಾಟೀಲ ಅವರ ಮುತುವರ್ಜಿಯಿಂದ ಸುಂದರವಾದ ಗಾಂಧಿ ಭವನ ತಲೆ ಎತ್ತಿದೆ. ಇಲ್ಲಿ ವರ್ಷವಿಡೀ ವಿವಿಧ ಕಾರ್ಯಚಟುವಟಿಕೆ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.